×
Ad

ಗಂಗೊಳ್ಳಿ ದೋಣಿ ದುರಂತ: ಓರ್ವ ಮೀನುಗಾರನ ಮೃತದೇಹ ಪತ್ತೆ

Update: 2025-07-16 09:40 IST

ಕುಂದಾಪುರ: ಗಂಗೊಳ್ಳಿ ಬಂದರಿನಿಂದ ಜು.15ರಂದು ಬೆಳಗ್ಗೆ ಮೀನುಗಾರಿಕೆಗೆ ತೆರಳಿದ್ದ ನಾಡದೋಣಿ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮಗುಚಿದ ಪರಿಣಾಮ ಸಮುದ್ರಪಾಲಾಗಿದ್ದ ಮೂವರು ಮೀನುಗಾರರ ಪೈಕಿ ಓರ್ವರ ಮೃತದೇಹ ಇಂದು ಮುಂಜಾನೆ ಪತ್ತೆಯಾಗಿದೆ.

ಮೃತರನ್ನು ಲೋಹಿತ್ ಖಾರ್ವಿ (38) ಎಂದು ಗುರುತಿಸಲಾಗಿದೆ. ಅವರ ಮೃತದೇಹವು ಕೋಡಿ ಲೈಟ್ ಹೌಸ್ ಬಳಿಯ ಸಮುದ್ರ ತೀರದಲ್ಲಿ ಬುಧವಾರ ಬೆಳಗಿನ ಜಾವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ.

ನಾಪತ್ತೆಯಾದ ಇನ್ನಿಬ್ಬರು ಮೀನುಗಾರರಾದ ಜಗನ್ನಾಥ ಖಾರ್ವಿ ಮತ್ತು ಸುರೇಶ್ ಖಾರ್ವಿ ಅವರ ಸುಳಿವು ಲಭ್ಯವಾಗಿಲ್ಲ. ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಈ ದೋಣಿ ಅವಘಡದಲ್ಲಿ ನಾಲ್ವರು ಸಮುದ್ರಪಾಲಾಗಿದ್ದು, ಈ ಪೈಕಿ ಸಂತೋಷ್ ಖಾರ್ವಿ ಎಂಬವರು ಈಜಿ ದಡ ಸೇರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News