×
Ad

ಗಂಗೊಳ್ಳಿ: ನಾಪತ್ತೆಯಾಗಿದ್ದ ಬಾಲಕನನ್ನು ಪತ್ತೆ ಹಚ್ಚಿ ಮನೆಯವರಿಗೊಪ್ಪಿಸಿದ ಪೊಲೀಸರು

Update: 2026-01-08 10:42 IST

ಕುಂದಾಪುರ: ಮನೆ ಸಮೀಪ ಆಟವಾಡುತ್ತಿದ್ದ ಬಾಲಕನೋರ್ವ ಸಂಜೆ ಬಳಿಕ ನಾಪತ್ತೆಯಾಗಿದ್ದು ಕೆಲ ಕಾಲ ಆತಂಕ ಸೃಷ್ಟಿಯಾದ ಘಟನೆ ಗಂಗೊಳ್ಳಿಯ ಗುಜ್ಜಾಡಿ ಬೆಣ್ಗೆರೆ ಎಂಬಲ್ಲಿ ಬುಧವಾರ ನಡೆದಿದೆ. ಬಳಿಕ ಗಂಗೊಳ್ಳಿ ಪೊಲೀಸರು ಹಾಗೂ ಸ್ಥಳೀಯರ ಸತತ ಹುಡುಕಾಟದ ಬಳಿಕ ರಾತ್ರಿ 12:40ರ ಸುಮಾರಿಗೆ ಮನೆ ಸಮೀಪದ ಎತ್ತರ ಪ್ರದೇಶದ ಕಲ್ಲಿನ ಪೊಟರೆಯೊಳಗೆ ಬಾಲಕನನ್ನು ಪೊಲೀಸರು ಪತ್ತೆ ಹಚ್ಚಿ ಮನೆಯವರಿಗೆ ಒಪ್ಪಿಸಿದ್ದಾರೆ.

ಘಟನೆ ವಿವರ: ಸ್ಥಳೀಯ ಸರಕಾರಿ ಶಾಲೆಯಲ್ಲಿ 4ನೇ ತರಗತಿ ಓದುತ್ತಿದ್ದ 10 ವರ್ಷದ ಬಾಲಕ ಬುಧವಾರ ಸಂಜೆ ಮನೆ ಸಮೀಪ ಬೇರೆ ಮಕ್ಕಳೊಂದಿಗೆ ಆಟವಾಡಿಕೊಂಡಿದ್ದ. ಆದರೆ ಮುಸ್ಸಂಜೆಯಾದರೂ ಬಾಲಕ ಮನೆಗೆ ಹಿಂದಿರುಗದೆ ನಾಪತ್ತೆಯಾಗಿದ್ದನು. ಗಾಬರಿಗೊಂಡ ಮನೆಮಂದಿ ಹಾಗೂ ಸ್ಥಳೀಯರು ಬಾಲಕನಿಗಾಗಿ ಎಲ್ಲ ಹುಡುಕಾಡಿದ್ದಾರೆ. ಆದರೆ ಪತ್ತೆಯಾಗಲಿಲ್ಲ. ಬಳಿಕ ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾರೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಸಾರ್ವಜನಿಕರನ್ನು ಒಗ್ಗೂಡಿಸಿಕೊಂಡು ವಿವಿಧೆಡೆ ಹುಡುಕಾಟ ನಡೆಸಿದ್ದಾರೆ. ತಡರಾತ್ರಿ 12:40ರ ಸುಮಾರಿಗೆ ಮನೆ ಪಕ್ಕದ ಎತ್ತರದ ಕಲ್ಲು ಪೊಟರೆಯೊಳಕ್ಕೆ ಬಾಲಕನನ್ನು ಠಾಣಾಧಿಕಾರಿ ಪವನ್ ನಾಯಕ್ ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಲಕನನ್ನು ರಕ್ಷಿಸಿದ ಠಾಣಾಧಿಕಾರಿ ಪವನ್ ನಾಯಕ್ ಮನೆಯವರಿಗೆ ಹಸ್ತಾಂತರಿಸಿದ್ದು ನಾಪತ್ತೆ ಪ್ರಕರಣ ಸುಖಾಂತ್ಯ ಕಂಡಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News