×
Ad

ಸೆ.1ರಂದು ಜಿನೇವಾ ಒಪ್ಪಂದ ದಿನಾಚರಣೆ; ನಿಧಿ ಸಂಗ್ರಹಣಾ ಜಾಥಾ

Update: 2023-08-31 21:09 IST

ಉಡುಪಿ, ಆ.31: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ವತಿಯಿಂದ ಜಿನೇವಾ ಒಪ್ಪಂದ ದಿನಾಚರಣೆ ಯೊಂದಿಗೆ ನಿಧಿ ಸಂಗ್ರಹಣಾ ಜಾಥಾ ಮತ್ತು ಆಯ್ದ ನೆರೆಸಂತ್ರಸ್ಥರಿಗೆ ಪರಿಕರಗಳ ವಿತರಣೆ ಕಾರ್ಯಕ್ರಮ ನಾಳೆ ಸೆ.1ರಂದು ಬೆಳಗ್ಗೆ 9:30ಕ್ಕೆ ಅಜ್ಜರಕಾಡು ಮಹಾತ್ಮಾ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೆರವಣಿಗೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ಉದ್ಘಾಟಿಸಲಿದ್ದು, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ಇತರರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದ ಸಮಾರೋಪ ಸಮಾರಂಭ ಮಧ್ಯಾಹ್ನ 1:00 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಶ್ರೀಕೃಷ್ಣಾಪುರ ಮಠದ ಶ್ರೀವಿದ್ಯಾಸಾಗರ ತೀರ್ಥ ಶ್ರೀಪಾದರು ಆಶೀರ್ವಚನ ನೀಡಲಿದ್ದಾರೆ.

ಮಹಾತ್ಮಾಗಾಂಧಿ ಕ್ರೀಡಾಂಗಣದಿಂದ ರಾಜಾಂಗಣದವರೆಗೆ ಸಾಗುವ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳು ಹುಂಡಿ (ಡಬ್ಬಿ) ಗಳೊಂದಿಗೆ ಸಾರ್ವಜನಿಕ ರಿಂದ ದೇಣಿಗೆ ಸಂಗ್ರಹಿಸಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News