ರಾಜ್ಯಪಾಲರ ಉಡುಪಿ ಪ್ರವಾಸ ರದ್ದು
Update: 2023-10-02 20:27 IST
ಉಡುಪಿ, ಅ.2: ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರ ನಾಳಿನ ಉಡುಪಿ ಜಿಲ್ಲಾ ಪ್ರವಾಸವನ್ನು ಅನಿವಾರ್ಯ ಕಾರಣಗಳಿಂದ ರದ್ದುಗೊಳಿಸಲಾಗಿದೆ ಎಂದು ಇಂದು ಸಂಜೆ ಪ್ರಕಟಿಸಲಾಗಿದೆ.
ರಾಜ್ಯಪಾಲರು ನಾಳೆ ಕೋಟದಲ್ಲಿ ಡಾ.ಕೋಟ ಶಿವರಾಮ ಕಾರಂತರ ಜನ್ಮ ದಿನೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು.