×
Ad

ಅ.10ರಂದು ರಾಜ್ಯಪಾಲರು ಉಡುಪಿ ಜಿಲ್ಲೆಯಲ್ಲಿ ಪ್ರವಾಸ

Update: 2023-10-09 20:05 IST

ಉಡುಪಿ, ಅ.9: ಕರ್ನಾಟಕ ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.

ಬೆಳಗ್ಗೆ 9 ಗಂಟೆಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸುವ ರಾಜ್ಯಪಾಲರು ಅಲ್ಲಿಂದ 10 ಗಂಟೆಗೆ ಉಡುಪಿ ಪ್ರವಾಸಿ ಮಂದಿರಕ್ಕೆ ಬರಲಿದ್ದಾರೆ. 10:30ಕ್ಕೆ ಕೋಟಕ್ಕೆ ಪ್ರಯಾಣಿಸುವ ಅವರು, ಅಲ್ಲಿ ನಾಳೆ ನಡೆಯುವ ಡಾ.ಶಿವರಾಮ ಕಾರಂತ ಜನ್ಮದಿನಾಚರಣೆ ಅಂಗವಾಗಿ ಕಾರಂತ ಥೀಮ್ ಪಾರ್ಕ್‌ನಲ್ಲಿ ನಡೆಯುವ ಕಾರಂತ ಹುಟ್ಟೂರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಖ್ಯಾತ ಶಾಸ್ತ್ರೀಯ ಸಂಗೀತ ಕಲಾವಿದ ಡಾ.ವಿದ್ಯಾಭೂಷಣರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಬಳಿಕ ಅಪರಾಹ್ನ 12:30ಕ್ಕೆ ಕೋಟದಿಂದ ಕೊಲ್ಲೂರಿಗೆ ನಿರ್ಗಮಿಸುವರು. ಕೊಲ್ಲೂರಿನ ಮೂಕಾಂಬಿಕಾ ದೇವಸ್ಥಾನದಲ್ಲಿ ದೇವಿದರ್ಶನ ಹಾಗೂ ಪ್ರಸಾದ ಸ್ವೀಕಾರದ ಬಳಿಕ 2 ಗಂಟೆಗೆ ಅಲ್ಲಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News