×
Ad

ಗ್ರಾಪಂ ಉಪಚುನಾವಣೆ: ಸಂತೆ, ಜಾತ್ರೆ ನಿಷೇಧ

Update: 2023-07-19 19:41 IST

ಉಡುಪಿ: ಗ್ರಾಮ ಪಂಚಾಯತಿ ಉಪ ಚುನಾವಣೆ-೨೦೨೩ಕ್ಕೆ ಸಂಬಂಧಿಸಿದಂತೆ, ಬ್ರಹ್ಮಾವರ ತಾಲೂಕಿನ ಹಾರಾಡಿ ಹಾಗೂ ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮಪಂಚಾಯತ್‌ನಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಜುಲೈ 23ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಹಾಗೂ ಸಾರ್ವಜನಿಕರಿಗೆ ಮತದಾನ ಮಾಡಲು ಅನುಕೂಲವಾಗುವಂತೆ, ಸದ್ರಿ ಗ್ರಾಮ ಪಂಚಾಯತ್ ಕ್ಷೇತ್ರ ವ್ಯಾಪ್ತಿಯ ಪ್ರದೇಶಗಳಲ್ಲಿ ಚುನಾವಣೆ ನಡೆಯುವ ದಿನದಂದು ಸಂತೆ ಮತ್ತು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News