×
Ad

ಹಂಗಳೂರು: ಬೈಕ್ ಗೆ ಬಸ್ ಢಿಕ್ಕಿ; ಪೌರ ಕಾರ್ಮಿಕ ಮೃತ್ಯು

Update: 2024-07-12 08:38 IST

ಕುಂದಾಪುರ: ಬೈಕ್ ಗೆ ಖಾಸಗಿ ಬಸ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ  ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 11 ರಂದು ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ನಡೆದಿದೆ.

ಮೃತಪಟ್ಟ ಬೈಕ್ ಸವಾರನನ್ನು ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ಸುಂದರ (39) ಎಂದು ಗುರುತಿಸಲಾಗಿದೆ.

ಕೋಟೇಶ್ವರದಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಬೈಕ್ ಗೆ,  ಹಂಗಳೂರು ದುರ್ಗಾಂಬ ಡಿಪ್ಪೋ ಒಳಗೆ ಹೋಗುತ್ತಿದ್ದ ವೇಳೆ ಬಸ್ ನ್ನು ಚಾಲಕ ಹಠಾತ್ತಾಗಿ ಹೆದ್ದಾರಿಯಲ್ಲಿ ನಿರ್ಲಕ್ಷತನದಿಂದ ತಿರುಗಿಸಿದಾಗ ನೇರ ಬೈಕ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. 

ಕುಂದಾಪುರ ಪುರಸಭೆ ಪೌರ ಕಾರ್ಮಿಕ ಮೂಲತಃ ಬಾರ್ಕೂರು ಬಂಡಿ ಮಠದವರಾಗಿದ್ದು ಕುಂದಾಪುರದ ಮನೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News