×
Ad

ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಹರೀಶ್ ಕಿಣಿ ನೇಮಕ

Update: 2025-08-05 18:05 IST

ಉಡುಪಿ, ಆ.5: ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಅಲೆವೂರು ಹರೀಶ್ ಕಿಣಿ ಪುನರ್ ನೇಮಕಗೊಂಡಿದ್ದಾರೆ.

ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷ ವಿನಯ ಕುಮಾರ್ ಸೊರಕೆ ಅವರ ಶಿಫಾರಸಿನ ಮೇರೆಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಹರೀಶ್ ಕಿಣಿ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಿದ್ದಾರೆ.

ಹರೀಶ್ ಕಿಣಿ ಈ ಹಿಂದೆ ಅಲೆವೂರು ಗ್ರಾಪಂ ಅಧ್ಯಕ್ಷರಾಗಿ, ಉಡುಪಿ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಾಗಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ನಿರ್ದೇಶಕರಾಗಿ ಹಾಗೂ ಉಡುಪಿ ಕ್ರೆಡಿಟ್ ಕೊ-ಆಪರೇಟಿವ್ ಸೊಸೈಟಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News