×
Ad

ಸಾಹಿತ್ಯವು ಜಾತಿ, ಮತ, ಮೀರಿ ಬೆಳೆದಾಗ ಸಾಮರಸ್ಯ ಸಾಧ್ಯ: ಪ್ರೊ.ಭಾಸ್ಕರ ಶೆಟ್ಟಿ

Update: 2023-11-21 20:17 IST

ಶಿರ್ವ, ನ.21: ಸಾಹಿತ್ಯವು ಜಾತಿ, ಮತ, ವರ್ಣ, ಧರ್ಮ ಭೇದಗಳನ್ನು ಮೀರಿ ಬೆಳೆದಾಗ ಸಾಮರಸ್ಯವನ್ನು ಬೆಳೆಸುತ್ತದೆ ಮತ್ತು ಎಲ್ಲರನ್ನೂ ಒಗ್ಗೂಡಿ ಸುತ್ತದೆ. ದೇಶಾಭಿಮಾನದ ಜೊತೆಗೆ ಭಾಷಾಭಿಮಾನವನ್ನೂ ಬೆಳೆಸಿಕೊಳ್ಳಬೇಕು ಎಂದು ಶಿರ್ವ ವಿದ್ಯಾವರ್ಧಕ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ.ವೈ.ಭಾಸ್ಕರ ಶೆಟ್ಟಿ ಹೇಳಿದ್ದಾರೆ.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತ್ ಕಾಪು ತಾಲೂಕು ಘಟಕದ ವತಿಯಿಂದ ಕನ್ನಡ ರಾಜ್ಯೋತ್ಸವ ಮಾಸಾ ಚರಣೆಯ ಪ್ರಯುಕ್ತ ಸಂಪದ -2023 ತಿಂಗಳ ಸಡಗರ ಕಾರ್ಯಕ್ರಮದ ಅಂಗವಾಗಿ ಮಂಗಳವಾರ ಶಿರ್ವ ಎಂಎಸ್ ಆರ್‌ಎಸ್ ಕಾಲೇಜಿನಲ್ಲಿ ಏರ್ಪಡಿಸಲಾದ ಶಾಲೆಯತ್ತ ಸಾಹಿತ್ಯ ಕಾರ್ಯಕ್ರಮ ವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕಿ ವಿದ್ಯಾ ಅಮ್ಮಣ್ಣಾಯ ಮಾತನಾಡಿ ಅಮ್ಮನ ಮಡಿಲಿನಿಂದ ಸಾಹಿತ್ಯವು ಆರಂಭವಾಗಿ ನಮ್ಮ ಬದುಕಿನ ಉದ್ದಕ್ಕೂ ಇರುತ್ತದೆ. ಸಾಹಿತ್ಯವು ಪದಗಳ ಜೋಡಣೆಯೊಂದಿಗೆ ಅನುಭವದ ಜೊತೆಗೆ ಭಾವನಾತ್ಮಕತೆಯನ್ನು ಹೊಂದಿದೆ ಎಂದರು.

ಅಧ್ಯಕ್ಷತೆಯನ್ನು ಕಾಪು ತಾಲೂಕು ಕಸಾಪ ಅಧ್ಯಕ್ಷರಾದ ಬಿ.ಪುಂಡಲೀಕ ಮರಾಠೆ ವಹಿಸಿದ್ದರು. ಕಾಲೇಜಿನ ಪ್ರಾಚಾರ್ಯ ಡಾ.ನಯನಾ ಪಕ್ಕಳ, ಕಾಪು ತಾಲೂಕು ಕಸಾಪ ಸಂಘಟನಾ ಕಾರ್ಯದರ್ಶಿ ದೀಪಕ್ ಕೆ.ಬೀರ ಉಪಸ್ಥಿರಿದ್ದರು.

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಪ್ರತಿನಿಧಿ ಕಟ್ಟಿಂಗೇರಿ ದೇವದಾಸ ಹೆಬ್ಬಾರ್ ಪ್ರಾಸ್ತಾವಿಕವಾಗಿ ಸ್ವಾಗತಿಸಿದರು. ಕನ್ನಡ ಉಪನ್ಯಾಕಿ ವರಮಹಾಲಕ್ಚ್ಮೀ ಕಾರ್ಯಕ್ರಮ ನಿರೂಪಿಸಿದರು. ಕಾಪು ತಾಲೂಕು ಕಸಾಪ ಗೌರವ ಕಾರ್ಯದರ್ಶಿ ಅಶ್ವಿನ್ ಲಾರೆನ್ಸ್ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News