ಧ್ವೇಷ ಭಾಷಣ ಪ್ರಕರಣ: ಶಾಸಕ ಯಶ್‌ಪಾಲ್ ಸುವರ್ಣಗೆ ಪೊಲೀಸರಿಂದ ನೋಟಿಸ್
Update: 2026-07-29 20:41 IST
ಉಡುಪಿ : ಧ್ವೇಷ ಭಾಷಣ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗುವಂತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅವರಿಗೆ ಪೊಲೀಸರು ಬುಧವಾರ ನೋಟೀಸ್ ನೀಡಿದ್ದಾರೆ.
ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿಯಾಗಿ ಭಾಷಣ ಮಾಡಿರುವ ಬಗ್ಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ನೀಡಿದ ದೂರಿನಂತೆ ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಬಗ್ಗೆ ತನಿಖೆ ಸಹಕರಿಸುವಂತೆ ಹಾಗೂ ವಿಚಾರಣೆಗಾಗಿ ಠಾಣೆಗೆ ಹಾಜರಾಗುವಂತೆ ನಗರ ಎಸ್ಸೈ ಭರತೇಶ್ ಕಂಕನವಾಡಿ ಶಾಸಕರ ನಿವಾಸಕ್ಕೆ ತೆರಳಿ ನೋಟೀಸ್ ನೀಡಿದರು. ಶಾಸಕ ಯಶ್‌ಪಾಲ್ ಸುವರ್ಣ ನೋಟೀಸ್ ಸ್ವೀಕರಿಸಿದರು.