×
Ad

ಉಡುಪಿ ಜಿಲ್ಲೆಯಾದ್ಯಂತ ಭಾರಿ ಮಳೆ: ಹಲವು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Update: 2024-07-08 08:54 IST

ಸಾಂದರ್ಭಿಕ ಚಿತ್ರ

ಉಡುಪಿ: ಉಡುಪಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು ಶಾಲಾ ಕಾಲೇಜುಗಳಿಗೆ ರಜೆ ನೀಡುವ ಅಧಿಕಾರವನ್ನು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನೀಡಿದ್ದಾರೆ. ಅದರಂತೆ ಜಿಲ್ಲೆಯ ಕೆಲವು ಶಾಲೆಗಳು ಈಗಾಗಲೇ ರಜೆ ಘೋಷಣೆ ಮಾಡಿದೆ ಎಂದು ತಿಳಿದು ಬಂದಿದೆ

ಉಡುಪಿ ಜಿಲ್ಲೆಯ ಎಲ್ಲಾ ಏಳೂ ತಾಲೂಕಿನಲ್ಲಿ ನಿರಂತರ ಮಳೆ ಆಗುತ್ತಿಲ್ಲ. ರಾತ್ರಿ 10 ಗಂಟೆಯ ನಂತರ ಮಳೆ ಕೆಲವಡೆ ಕಡಿಮೆಯಾಗಿದ್ದು ಪರಿಸ್ಥಿತಿಯನ್ನು ನೋಡಿಕೊಂಡು ರಜೆ ಘೋಷಣೆ ಮಾಡುವ ಅಧಿಕಾರವನ್ನು ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಅದರಂತೆ ಬೈಂದೂರು ತಾಲೂಕಿನ 19 ಶಾಲೆಗಳಿಗೆ ಈಗಾಗಲೇ ರಜೆ ಘೋಷಣೆ ಮಾಡಲಾಗಿದೆ. ಅದೇ ರೀತಿ ಉಡುಪಿಯ ಹೂಡೆಯ ಸಾಲಿಹಾತ್ ಶಾಲೆ, ಎಂಜಿಎಂ ಕಾಲೇಜು ಗಳಿಗೆ ರಜೆ ಘೋಷಣೆ ಮಾಡಿರುವ ಬಗ್ಗೆ ಮಾಹಿತಿ ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News