ಹೆಗ್ಗುಂಜೆ ಮನೆ ತೆರವು ಪ್ರಕರಣ: ಇಂದು ಬಿಜೆಪಿಯಿಂದ ಪ್ರತಿಭಟನೆ
Update: 2026-01-13 08:10 IST
ಬ್ರಹ್ಮಾವರ: ತಾಲೂಕಿನ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯ ಸರಕಾರಿ ಸ್ಥಳದಲ್ಲಿ ನಿರ್ಮಿಸಲಾದ ಮನೆ ಮತ್ತು ಶೆಡ್ ಗಳನ್ನು ಬ್ರಹ್ಮಾವರ ತಹಶೀಲ್ದಾರ್ ನೇತೃತ್ವದಲ್ಲಿ ತೆರವು ಗೊಳಿಸಿದನ್ನು ವಿರೋಧಿಸಿ ಇಂದು ಬೆಳಗ್ಗೆ ಬ್ರಹ್ಮಾವರ ತಾಲೂಕು ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸಲು ಬಿಜೆಪಿ ನಿರ್ಧರಿಸಿದೆ.
ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮತ್ತು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ.
ಬಿಲ್ಲಾಡಿ ಗ್ರಾಮದ ದೇವಕಿ ಶೇಖರ ನಾಯ್ಕ ಅವರು ಸರಕಾರಿ ಜಾಗದಲ್ಲಿ ನಿರ್ಮಾಣ ಹಂತದ ಮನೆ ಹಾಗೂ ನಾಲ್ಕು ಕುಟುಂಬಗಳ ಶೆಡ್ ನ್ನು ಸೋಮವಾರ ಬ್ರಹ್ಮಾವರ ತಹಶೀಲ್ದಾರ್ ನೇತ್ರತ್ವದಲ್ಲಿ ತೆರವುಗೊಳಿಸಲಾಗಿತ್ತು.