ಹಿರಿಯಡ್ಕ, ಅ.10: ಗೂಡ್ಸ್ ವಾಹನದಲ್ಲಿ ಅಕ್ರಮ ಜಾನುವಾರು ಸಾಗಾಟಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿರಿಯಡ್ಕ ಪೊಲೀಸರು ಅಂಜಾರು ಜಂಕ್ಷನ್ ಬಳಿ ಅ.9ರಂದು ಸಂಜೆ ವೇಳೆ ಬಂಧಿಸಿದ್ದಾರೆ.

ಕಟಪಾಡಿ ಸರ್ಕಾರಿಗುಡ್ಡೆಯ ಅಬ್ದುಲ್ ಸತ್ತಾರ್ (54) ಹಾಗೂ ಇನ್ನಂಜೆ ಗ್ರಾಮದ ಮಾಳದಬೆಟ್ಟುವಿನ ಯೋಗೀಶ ನಾಯ್ಕ್(49) ಬಂಧಿತ ಆರೋಪಿಗಳು. ಇವರಿಂದ ವಾಹನ ಹಾಗೂ ಅದರಲ್ಲಿ 20 ಸಾವಿರ ರೂ. ಮೌಲ್ಯದ ನಾಲ್ಕು ಜಾನುವಾರುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇವರು ಕಾರ್ಕಳ ತಾಲೂಕಿನ ಕುಕ್ಕುಜೆ ಬಳಿಯಿಂದ ದನಕಳ್ಳತನ ಮಾಡಿ ವಧೆಗಾಗಿ ಸಾಗಾಟ ಮಾಡುತ್ತಿದ್ದರೆಂದು ದೂರಲಾಗಿದೆ. ಈ ಬಗ್ಗೆ ಹಿರಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor