×
Ad

ಉಡುಪಿ| ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದಕ ಪೋಸ್ಟ್: ಹಿಂಜಾವೇ ಮುಖಂಡನ ಸೆರೆ

Update: 2025-06-02 18:33 IST

ರತ್ನಾಕರ ಅಮೀನ್

ಉಡುಪಿ: ಸಾಮಾಜಿಕ ಜಾಲತಾಣಗಳಲ್ಲಿ ಕೋಮುಗಲಭೆ ಉಂಟು ಮಾಡಲು ಪ್ರೇರೆಪಿಸುವಂತಹ ಪೋಸ್ಟ್ ಹಾಕಿದ ಆರೋಪದಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡನನ್ನು ಅಜೆಕಾರು ಪೊಲೀಸರು ಬಂಧಿಸಿದ್ದಾರೆ.

ಮರ್ಣೆ ಗ್ರಾಮದ ಅಜೆಕಾರು ನಿವಾಸಿ ರತ್ನಾಕರ ಅಮೀನ್ ಬಂಧಿತ ಆರೋಪಿ.

ಈತ ಫೇಸ್‌ಬುಕ್ ಪೇಜ್‌ನಲ್ಲಿ ಜಾತಿ ಮತ್ತು ಧರ್ಮಗಳ ನಡುವೆ ವೈರುತ್ವ ಮತ್ತು ಕೋಮುಗಲಭೆ ಉಂಟು ಮಾಡಲು ಪ್ರೇರೆಪಿಸುವಂತಹ ಪೋಸ್ಟ್ ಮಾಡಿದ್ದು, ಈತನ ವಿರುದ್ಧ ಅಜೆಕಾರು ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದೆ. ಅದರಂತೆ ಆರೋಪಿ ರತ್ನಾಕರ ಅಮೀನ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News