ಉಡುಪಿ, ನ.27: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಆಯಾ ವಿಧಾನಸಭಾ ಕ್ಷೇತ್ರದ ಶಾಸಕರುಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನವೆಂಬರ್ 28ರ ಶನಿವಾರ ನಡೆಯಲಿದೆ.

ಬೈಂದೂರು ತಾಲೂಕಿನ ಕೆರ್ಗಾಲು ಗ್ರಾಮದ ಮಟ್ನಕಟ್ಟೆ ಗಣಪತಿ ದೇವಸ್ಥಾನದಲ್ಲಿ ಬೆಳಗ್ಗೆ 10 ಗಂಟೆಗೆ ಬೈಂದೂರು ಶಾಸಕ ಗುರುರಾಜ್ ಶೆಟ್ಟಿ ಗಂಟಿಹೊಳೆ ಅಧ್ಯಕ್ಷತೆಯಲ್ಲಿ, ಬ್ರಹ್ಮಾವರ ತಾಲೂಕಿನ ಅರೂರು ಗ್ರಾಮ ಪಂಚಾಯತ್ ಸಭಾಭವನದಲ್ಲಿ ಉಡುಪಿ ಶಾಸಕ ಯಶ್ಪಾಲ್ ಎ ಸುವರ್ಣ ಅಧ್ಯಕ್ಷತೆಯಲ್ಲಿ, ಕುಂದಾಪುರ ತಾಲೂಕಿನ ಹಾರ್ದಳ್ಳಿ-ಮಂಡಳಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ಕುಂದಾಪುರ ಶಾಸಕ ಎ. ಕಿರಣ್ ಕುಮಾರ್ ಕೊಡ್ಗಿ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ತಾಲೂಕಿನ ಬಡಗಬೆಟ್ಟು ಗ್ರಾಮದ ಅಂಬಾ ಭವಾನಿ ದೇವಸ್ಥಾನದ ಸಭಾಂಗಣದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳು ನಡೆಯಲಿವೆ.

ಸಾರ್ವಜನಿಕರು ಈ ಸಭೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಅಹವಾಲುಗಳು ಸೇರಿದಂತೆ ಸರಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ, ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor