ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ
Update: 2025-06-14 10:30 IST
ಕುಂದಾಪುರ: ಗೃಹ ಸಚಿವ ಡಾ. ಜಿ.ಪರಮೇಶ್ವರ್ ಅವರು ಶನಿವಾರ ಬೆಳಿಗ್ಗೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ಕ್ಷೇತ್ರಕ್ಕೆ ಭೇಟಿ ಮಾಡಿ ದೇವಿ ದರ್ಶನ ಪಡೆದು ವಿಶೇಷ ಪೂಜೆಯಲ್ಲಿ ಭಾಗಿಯಾದರು.
ದೇವಳದ ಹಿರಿಯ ಅರ್ಚಕರಾದ ಡಾ. ಎನ್. ನರಸಿಂಹ ಅಡಿಗರ ನೇತೃತ್ವದಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ಈ ವೇಳೆ ಬಂದರು ಮತ್ತು ಮೀನುಗಾರಿಕಾ ಇಲಾಖೆ ಸಚಿವ ಮಂಕಾಳ್ ವೈದ್ಯ, ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ, ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೆ. ಬಾಬು ಶೆಟ್ಟಿ ತೆಗ್ಗರ್ಸೆ, ಡಾ. ಅಭಿಲಾಷ್ ಪಿ.ವಿ., ರಘುರಾಮ ದೇವಾಡಿಗ ಆಲೂರು, ಸುರೇಂದ್ರ ಶೆಟ್ಟಿ, ಮಹಾಲಿಂಗ ನಾಯ್ಕ್, ಧನಾಕ್ಷಿ ವಿಶ್ವನಾಥ ಪೂಜಾರಿ, ಕೆ. ಸುಧಾ, ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಶೆಟ್ಟಿ, ಪ್ರಮುಖರಾದ ಎಂ.ಎ. ಗಫೂರ್, ಉದಯಕುಮಾರ್ ಶೆಟ್ಟಿ ಮುನಿಯಾಲು, ಎಸ್. ರಾಜು ಪೂಜಾರಿ, ಎಸ್. ಪ್ರಕಾಶ್ಚಂದ್ರ ಶೆಟ್ಟಿ, ಸದಾಶಿವ ಡಿ. ಪಡುವರಿ ಮೊದಲಾದವರಿದ್ದರು.