ಹಾಸ್ಟೆಲ್ ವಾರ್ಡನ್ ನಾಪತ್ತೆ
Update: 2026-01-17 20:24 IST
ಉಡುಪಿ, ಜ.17: ತಾಲೂಕಿನ 76 ಬಡಗುಬೆಟ್ಟು ಗ್ರಾಮದ ಕುಕ್ಕಿಕಟ್ಟೆ ಯಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯದ ವಾರ್ಡನ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ವಿದ್ಯಾರ್ಥಿ ನಿಲಯದ ಒಂದನೇ ಮಹಡಿಯಲ್ಲಿ ವಾಸವಿದ್ದ ಚಿತ್ರದುರ್ಗ ಮೂಲದ ದರ್ಶನ್ ಎಸ್ (23) ಎಂಬ ಯುವಕ ಜನವರಿ 12ರಂದು ರಾತ್ರಿ 8 ಬಳಿಕ ನಾಪತ್ತೆಯಾಗಿದ್ದಾರೆ.
5 ಅಡಿ 5 ಇಂಚು ಎತ್ತರ, ಸಾಧಾರಣ ಶರೀರ, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ, ಇಂಗ್ಲೀಷ್ ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯ ದೂ.ಸಂಖ್ಯೆ: 0820-2520444, ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444, ಪೊಲೀಸ್ ನಿರೀಕ್ಷಕರು ದೂ.ಸಂಖ್ಯೆ: 9480805408 ಹಾಗೂ ಪೊಲೀಸ್ ಉಪನಿರೀಕ್ಷಕರು ದೂ.ಸಂಖ್ಯೆ: 9480805445ನ್ನು ಸಂಪರ್ಕಿಸಬಹುದು ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.