ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ, ಸೆ.9: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿ ಯಿಂದ ಮಕ್ಕಳ ದಿನಾಚರಣೆಯ ಸಂದರ್ಭದಲ್ಲಿ ತಮ್ಮ ಪ್ರಾಣದ ಹಂಗು ತೊರೆದು ಇತರರ ಪ್ರಾಣ ರಕ್ಷಣೆಗಾಗಿ ಅಸಾಧಾರಣ ಧೈರ್ಯ ಪ್ರದರ್ಶಿಸಿದ 6ರಿಂದ 18 ವರ್ಷದೊಳಗಿನ ಬಾಲಕರಿಗೆ ಹೊಯ್ಸಳ ಮತ್ತು ಬಾಲಕಿಯರಿಗೆ ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅಲ್ಲದೇ ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷಗಳ ಕಾಲ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ತಲಾ 25,000 ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ಹಾಗೂ ಸಂಸ್ಥೆಗಳಿಗೆ ತಲಾ 1,00,000ರೂ. ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಿ ಗೌರವಿಸಲಾಗುವುದು.
ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 27 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂಖ್ಯೆ: 0820-2574978 ಅನ್ನು ಸಂಪರ್ಕಿಬಹುದು ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.