×
Ad

ಆ. 5: ಬ್ರಹ್ಮಾವರದಲ್ಲಿ ಬೃಹತ್ ಉದ್ಯೋಗ ಮೇಳ

Update: 2023-07-27 21:42 IST

ಉಡುಪಿ, ಜು.27: ಬ್ರಹ್ಮಾವರದ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯು ಇದೇ ಬರುವ ಆ.5ರಂದು ಬೃಹತ್ ಉದ್ಯೋಗ ಮೇಳವನ್ನು ಕಾಲೇಜು ಆವರಣದಲ್ಲಿ ಹಮ್ಮಿಕೊಂಡಿದೆ.

ಪ್ರಮುಖ 20ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳುತ್ತಿವೆ ಎಂದು ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಸುಬ್ರಹ್ಮಣ್ಯ ಅವರು ಇಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಗ್ರಾಮೀಣ ನಿರುದ್ಯೋಗಿ ಯುವಕ ಯುವತಿಯರಿಗೆ ಉದ್ಯೋಗ ಅವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ಸಂಸ್ಥೆಯು ಈ ಉದ್ಯೋಗ ಮೇಳವನ್ನು ಆಯೋಜಿಸಿದೆ. ಇದರ ಮುಖ್ಯ ಉದ್ದೇಶ ಎಲ್ಲರಿಗೂ ಉದ್ಯೋಗ. ಆಯ್ಕೆಯಾದವರಿಗೆ ಸ್ಥಳದಲ್ಲೇ ನೇಮಕಾತಿ ಆದೇಶ ವಿತರಣೆ ಮಾಡಲಾಗುವುದು ಎಂದರು.

ಯಾವುದೇ ಪದವಿ, ಡಿಪ್ಲೋಮಾ, ಐಟಿಐ, ಸ್ನಾತಕೋತ್ತರ ಅಭ್ಯರ್ಥಿಗಳು ಈ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಉಚಿತ ಆನ್ಲೈನ್ ನೋಂದಣಿ ಕಡ್ಡಾಯವಾಗಿದೆ ಎಂದು ಸುಬ್ರಹ್ಮಣ್ಯ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ನಿರ್ದೇಶಕಿ ಮಮತಾ, ಪ್ರಾಂಶುಪಾಲರಾದ ಡಾ.ಸೀಮಾ ಜಿ.ಭಟ್, ಉಪನ್ಯಾಸಕಿಯರಾದ ಸ್ವಾತಿ, ಸವಿತಾ ಹಾಗೂ ವೈಷ್ಣವಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News