×
Ad

ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನೆ

Update: 2024-10-23 17:57 IST

ಕುಂದಾಪುರ: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಘಟಕದ ವತಿಯಿಂದ ವಾರ್ಷಿಕ ಕ್ರೀಡಾ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಸಂಪನ್ಮೂಲ ವ್ಯಕ್ತಿಯಾಗಿ ಕಾಮನ್ ವೆಲ್ತ್‌ನ ಅಂತಾರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಸತೀಶ್ ಖಾರ್ವಿ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಮೊಬೈಲ್ ಬಳಕೆಯಿಂದ ದೂರ ಸರಿದು ಹೆಚ್ಚು ಸಮಯ ವನ್ನು ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ರಾಷ್ಟ್ರಧ್ವಜವನ್ನು ರಾಷ್ಟ್ರಗೀತೆಯೊಂದಿಗೆ ತನ್ನ ಹೆಗಲಿನ ಮೇಲೆ ಹೊದಿಸಿಕೊಂಡು ವಿಜಯ ವೇದಿಕೆ ಏರಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲೆ ಶಬೀನಾ ಎಚ್. ಮಾತನಾಡಿ, ವಿದ್ಯಾರ್ಥಿಗಳು ಪಾಠದ ಜೊತೆಗೆ ಆಟೋಟಗಳಲ್ಲಿಯೂ ಭಾಗವಹಿಸುವುದು ಬಹಳ ಮುಖ್ಯ ಹಾಗೂ ಪ್ರಸ್ತುತ ದಿನಗಳಲ್ಲಿನ ಕ್ರೀಡೆಯು ಬಹಳ ಮಹತ್ವ ಪಡೆದಿದೆ ಎಂದು ಹೇಳಿದರು.

ವೇದಿಕೆಯಲ್ಲಿ ದೈಹಿಕ ಶಿಕ್ಷಣ ನಿರ್ದೇಶಕ ಸೌರಭ ಹಾಗೂ ವಿದ್ಯಾರ್ಥಿ ಕ್ರೀಡಾ ಮುಖಂಡ ಮನಾಜ್ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರಿದಾ ಕಾರ್ಯಕ್ರಮ ನಿರೂಪಿಸಿದರು. ಅನಿಷಾ ಸ್ವಾಗತಿಸಿದರು. ಮುಝಮ್ಮಿಲ್ ಗಣ್ಯರನ್ನು ಪರಿಚಯಿಸಿದರು. ಬುಶ್ರಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News