×
Ad

ಮಕ್ಕಳ ಸಮುದಾಯ ಕೇಂದ್ರದಲ್ಲಿ ಪುಸ್ತಕ ಪ್ರದರ್ಶನ ಉದ್ಘಾಟನೆ

Update: 2023-07-20 20:15 IST

ಉಡುಪಿ, ಜು.20: ಕೇರಳದ ಗ್ರಂಥಾಲಯ ಚಳುವಳಿಯ ಪಿತಾಮಹ ಪಿ.ಎನ್.ಪಣಿಕ್ಕರ್ (ಪುತುವಾಯಿಲ್ ನಾರಾಯಣ ಪಣಿಕ್ಕರ್) ಇವರ ಪುಣ್ಯತಿಥಿಯ ಪ್ರಯುಕ್ತ ಜೂನ್ 19ನ್ನು ರಾಷ್ಟ್ರೀಯ ಓದುವ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜೂನ್ 19ರಿಂದ ಜುಲೈ 18ರವರೆಗೆ ಓದುವ ತಿಂಗಳು ಕಾರ್ಯಕ್ರಮ ವನ್ನು ಆಚರಿಸಲಾಗುತ್ತದೆ.

ಮಕ್ಕಳು ಹಾಗೂ ಸಾರ್ವಜನಿಕರನ್ನು ಗ್ರಂಥಾಲಯದತ್ತ ಆರ್ಕಷಿಸಿ ಅವರಲ್ಲಿ ಪುಸ್ತಕ ಓದುವ ಹವ್ಯಾಸ ಮತ್ತು ಗ್ರಂಥಾಲಯಗಳ ಮಹತ್ವದ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಓದುವ ತಿಂಗಳು ಕಾರ್ಯಕ್ರಮದ ಪ್ರಯುಕ್ತ ಮಂಗಳವಾರ ನಡೆದ ಪುಸ್ತಕ ಪ್ರದರ್ಶನವನ್ನು ಅಜ್ಜರಕಾಡಿನ ವಿದ್ಯಾ ವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಮಕ್ಕಳ ಸಮುದಾಯ ಕೇಂದ್ರ ಗ್ರಂಥಾಲಯದಲ್ಲಿ ಸಾಹಿತಿ ಸಂಗೀತ ಜಾನ್ಸನ್ ಹಾಗೂ ನಗರ ಗ್ರಂಥಾಲಯ ದಲ್ಲಿ ಹಿರಿಯ ಸಾಹಿತಿ ಹಾಗೂ ಜಿಲ್ಲಾ ಗ್ರಂಥಾಲಯ ಪ್ರಾಧಿಕಾರದ ಉಪಾಧ್ಯಕ್ಷೆ ವಸಂತಿ ಶೆಟ್ಟಿ ಬ್ರಹ್ಮಾವರ ಉದ್ಘಾಟಿಸಿದರು.

ಶಾಲಾ ಮಕ್ಕಳಿಗಾಗಿ ಪುಸ್ತಕ ಓದುವ ಸ್ಪರ್ಧೆ, ಕನ್ನಡ ಪುಸ್ತಕ ಓದಿ ಕಥೆ ಹೇಳುವ ಸ್ಪರ್ಧೆ, ಪುಸ್ತಕ ಓದಿ ವಿಷಯ ತಿಳಿಸುವ ಸ್ಪರ್ಧೆಗಳನ್ನು ಏರ್ಪಡಿಸಿದ್ದು, ಅತೀ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳು ಭಾಗವಹಿಸಿದ್ದರು.

ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ ಸ್ವಾಗತಿಸಿ, ಶಕುಂತಳಾ ಕುಂದರ್ ನಿರೂಪಿಸಿದರು. ಗ್ರಂಥಪಾಲಕಿ ರಂಜಿತ ಸಿ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News