×
Ad

ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಉದ್ಘಾಟನೆ

Update: 2023-11-05 20:29 IST

ಉಡುಪಿ : ಪರ್ಯಾಯ ಶ್ರೀಕೃಷ್ಣಾಪುರ ಮಠದ ಆಶ್ರಯದಲ್ಲಿ ಶ್ರೀವೀರಾಂಜನೇಯ ಯಕ್ಷಮಿತ್ರ ಮಂಡಳಿ ಬಂಗಾರಮಕ್ಕಿ ಮತ್ತು ಚಿಟ್ಟಾಣಿ ಅಭಿಮಾನಿ ಬಳಗ ಉಡುಪಿ ಇವರ ಸಹಯೋಗದೊಂದಿಗೆ ಚಿಟ್ಟಾಣಿ ಸಂಸ್ಮರಣಾ ಯಕ್ಷಗಾನ ಸಪ್ತಾಹ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವು ರವಿವಾರ ಶ್ರೀಕೃಷ್ಣ ಮಠದ ಮಧ್ವ ಮಂಟಪದಲ್ಲಿ ಜರಗಿತು.

ಸಪ್ತಾಹವನ್ನು ಉದ್ಘಾಟಿಸಿದ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾ ಸಾಗರತೀರ್ಥ ಸ್ವಾಮೀಜಿ ಮಾತನಾಡಿ, ಯಕ್ಷಗಾನವು ನಮ್ಮ ನಾಡಿನ ಸಂಸ್ಕೃತಿ ಯನ್ನು ಪರಿಚಯಿಸುವ ಮತ್ತು ಕಲೆಯನ್ನು ಅರಳಿಸುವ ಹಾಗೂ ನಮ್ಮ ಇಂದ್ರಿಯ ಗಳನ್ನು ಜಾಗೃತಗೊಳಿಸುವ ಒಂದು ಪ್ರಕಾರವಾಗಿದೆ ಅದನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿ ಎಂದರು.

ಉಡುಪಿ ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಎಂ.ಗಂಗಾಧರ್ ರಾವ್, ಬಳಗದ ಅಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ಎಂ.ಗೋಪಿಕೃಷ್ಣ ರಾವ್, ಸುಬ್ರಹ್ಮಣ್ಯ ಚಿಟ್ಟಾಣಿ ಮೊದಲಾದವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News