ಉಡುಪಿ, ನ.3: ಹಾವಂಜೆ ಗೋಳಿಕಟ್ಟೆಯ ನೂತನ ಅಲ್ ಫಲಾಹ್ ಜುಮಾ ಮಸೀದಿಯ ಉದ್ಘಾಟನೆ, ಸಾರ್ವಜನಿಕ ಮಸೀದಿ ಸಂದರ್ಶನ ಮತ್ತು ಸೌಹಾರ್ದ ಸಂಗಮ ಕಾರ್ಯಕ್ರಮವನ್ನು ನ.4ರಂದು ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 9 ಗಂಟೆಗೆ ಮಸೀದಿಯನ್ನು ಉಡುಪಿ ಜಿಲ್ಲಾ ಖಾಝಿ ಝೈನುಲ್ ಉಲಮಾ ಎಂ.ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಉದ್ಘಾಟಿಸಲಿರುವರು. ಮಸೀದಿಯ ಖತೀಬ್ ಅಬ್ದುಲ್ ರಝಾಕ್ ಅಲ್ ಮದನಿ ಅಲ್ ಪುರ್ಖಾನಿ ಭಾಷಣ ಮಾಡಲಿರುವರು. ಸಾರ್ವಜನಿಕ ಮಸೀದಿ ಸಂದರ್ಶನ ಕಾರ್ಯಕ್ರಮವು ಬೆಳಗ್ಗೆ 10:30ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.

ಸಂಜೆ 5:45ಕ್ಕೆ ನಡೆಯುವ ಸೌಹಾರ್ದ ಸಂಗಮ ಕಾರ್ಯಕ್ರಮವನ್ನು ಸೈಯದ್ ಜಾಫರ್ ಅಸ್ಸಖಾಫ್ ತಂಙಳ್ ಕೋಟೇಶ್ವರ ಉದ್ಘಾಟಿಸಲಿರುವರು. ಶ್ರೀಕ್ಷೇತ್ರ ಕೇಮಾರು ಸಾಂದೀಪನಿ ಸಾಧನಾಶ್ರಮದ ಶ್ರೀಈಶವಿಠಲ ದಾಸ ಸ್ವಾಮೀಜಿ, ಉಡುಪಿ ಮದರ್ ಆಫ್ ಸಾರೋಸ್ ಚರ್ಚಿನ ಧರ್ಮಗುರು ರೆ.ಫಾ.ಡೆನ್ನಿಸ್ ಡೇಸಾ ಹಾಗೂ ಶಿವಮೊಗ್ಗ ಸಾದಾ ಇಸ್ಲಾಮಿಕ್ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ರಶೀದ್ ಝೈನಿ ಕಾಮಿಲ್ ಸಖಾಫಿ ಸೌಹಾರ್ದ ಸಂದೇಶ ನೀಡಲಿರುವರು. ಅಧ್ಯಕ್ಷತೆಯನ್ನು ಮಸೀದಿ ಅಧ್ಯಕ್ಷ ಜಿ.ಎ.ರಹ್ಮಾನ್ ವಹಿಸಲಿರುವರು.

ಈ ಸಂದರ್ಭದಲ್ಲಿ ಪದ್ಮಶ್ರೀ ಹರೇಕಳ ಹಾಜಬ್ಬ, ರವಿ ಕಟಪಾಡಿ, ಪ್ರಾಂಕಿ ಡಿಸೋಜರನ್ನು ನಾಗರಿಕ ಸನ್ಮಾನಿಸಲಾಗುವುದು. ಅಡ್ವಕೇಟ್ ಮುಹಮ್ಮದ್ ತಾಹೀರ್, ಮುಹಮ್ಮದ್ ಸಾಹೇಬ್, ಖಾಲಿದ್ ಅಬ್ದುಲ್ ಅಝೀಝ್, ಮುಹಮ್ಮದ್ ಅಲಿ ಗೋಳಿಕಟ್ಟೆ, ಅಬ್ದುಲ್ ರವೂಫ್ ಉಳ್ಳಾಲ, ಇಸ್ಮಾಯೀಲ್ ಭಟ್ಕಳ, ಮುಹಮ್ಮದ್ ಜುನೈದ್ ಅಸಾದಿ ದೊಡ್ಡಣಗುಡ್ಡೆ ಅವರನ್ನು ಸನ್ಮಾನಿಸಲಾಗುವುದು.

ಮುಖ್ಯ ಅತಿಥಿಗಳಾಗಿ ಆರೋಗ್ಯ ಸಚಿವ ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ಪ್ರಮುಖರಾದ ಇಫ್ತಿಕಾರ್ ಅಲಿ, ಹೈದರ್ ಪರ್ತಿಪ್ಪಾಡಿ, ಎಂ.ಎ.ಗಫೂರ್, ಹಾವಂಜೆ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ಮೊಕ್ತೇಸರ ಮಹೇಶ್ ಶೆಟ್ಟಿ, ಕುಕ್ಕಿಕಟ್ಟೆ ಶ್ರೀದುರ್ಗಾ ಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಅಶೋಕ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಮುಸ್ಲಿಮ್ ಒಕ್ಕೂಟದ ಮುಹಮ್ಮದ್ ಮೌಲ ಮೊದಲಾದವರು ಭಾಗವಹಿಸಲಿರುವರು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor