ಕಾರ್ಕಳದಲ್ಲಿ ಆ.14ರಂದು ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಉದ್ಘಾಟನೆ

ಒಂದೇ ಸೂರಿನಡಿ ಎಲ್ಲಾ ಉತ್ಪನ್ನಗಳು ಲಭ್ಯ - ವಾಸುದೇವ ಭಟ್‌

Update: 2026-08-13 14:55 IST

ಕಾರ್ಕಳ: ಕಾರ್ಕಳದ ಜೋಡುರಸ್ತೆಯ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಕೆಳ ಮಹಡಿ ಹಾಗೂ ಎರಡನೇ ಮಹಡಿಯಲ್ಲಿ ಎನ್‌ಪಿ ಎಲೆಕ್ಟ್ರಾನಿಕ್ಸ್‌ & ಫರ್ನಿಚರ್ಸ್‌ ಮಳಿಗೆಯ ಶುಭಾರಂಭ ಆ.14ರಂದು ಬೆಳಿಗ್ಗೆ 10.30ಕ್ಕೆ ನಡೆಯಲಿದೆ ಎಂದು ಎನ್‌ಪಿ ಸಮೂಹ ಸಂಸ್ಥೆಯ ಅಧ್ಯಕ್ಷ ವಾಸುದೇವ ಭಟ್‌ ತಿಳಿಸಿದ್ದಾರೆ.

ವಿಶೇಷ ಆಫರ್‌ :

ಒಂದೇ ಸೂರಿನಡಿ ವಿವಿಧ ಗೃಹೋಪಯೋಗಿ ಉತ್ಪನ್ನಗಳು ಲಭ್ಯವಿದ್ದು, ಉದ್ಘಾಟನೆಯ ಪ್ರಯುಕ್ತ ಆ.14ರಿಂದ ಆ.25ರವರೆಗೆ ವಿಶೇಷ ಕೊಡುಗೆಗಳನ್ನು ನೀಡಲಾಗುವುದು. ಖರೀದಿಯ ಮೊತ್ತಕ್ಕೆ ಅನುಗುಣವಾಗಿ ಗಿಫ್ಟ್‌ ಹ್ಯಾಂಪರ್‌ಗಳು, ಗಿಫ್ಟ್‌ ಕೂಪನ್‌ಗಳು ಹಾಗೂ 1,500 ರೂ. ನಿಂದ 5,000 ರೂ. ವರೆಗಿನ ಉಡುಗೊರೆಗಳನ್ನು ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಸಭಾ ಕಾರ್ಯಕ್ರಮ :

ಆ.14ರಂದು ಬೆಳಿಗ್ಗೆ 11ಕ್ಕೆ ಸಹಕಾರ ಸಿಂಧೂರ ಕಾಂಪ್ಲೆಕ್ಸ್‌ನ ಮೂರನೇ ಮಹಡಿಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದ್ದು, ರವೀಂದ್ರ ಪ್ರಭು ಕಡಾರಿ ಅಧ್ಯಕ್ಷತೆ ವಹಿಸಲಿದ್ದಾರೆ. ಶಾಸಕ ವಿ. ಸುನಿಲ್‌ ಕುಮಾರ್‌ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮಾಜಿ ಶಾಸಕ ರಘುಪತಿ ಭಟ್‌ ಕೆಳ ಮಹಡಿಯ ಮಳಿಗೆ, ಉದಯ ಕೃಷ್ಣಯ್ಯ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ಉದಯ ಶೆಟ್ಟಿ ಮುನಿಯಾಲು ಎರಡನೇ ಮಹಡಿಯ ಮಳಿಗೆ ಉದ್ಘಾಟಿಸಲಿದ್ದಾರೆ. ಕ್ರಿಯೇಟಿವ್‌ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕ ಅಶ್ವತ್‌ ಎಸ್.ಎಲ್. ವೆಬ್‌ಸೈಟ್‌ ಅನಾವರಣಗೊಳಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಡಾ.ರವೀಂದ್ರ ಶೆಟ್ಟಿ ಬಜಗೋಳಿ, ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಪ್ರಸನ್ನ ಕುಮಾರ್‌, ತಾ.ಪಂ. ಮಾಜಿ ಅಧ್ಯಕ್ಷ ವಿಕ್ರಂ ಹೆಗ್ಡೆ ಕಣಜಾರು, ಕಾರ್ಕಳ ಬಿಲ್ಲವ ಸಮಾಜ ಸಂಘ ಅಧ್ಯಕ್ಷ ಪ್ರಮಲ್‌ ಕುಮಾರ್‌, ಜೋಡುರಸ್ತೆ ಶ್ರೀ ದುರ್ಗಾಪರಮೇಶ್ವರಿ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಸಂತೋಷ್‌ ರಾವ್‌ ಹಾಗು ಜಾನ್ಸ್‌ ಸ್ಪೋರ್ಟ್ಸ್‌ ಅಕಾಡೆಮಿಯ ಅಧ್ಯಕ್ಷ ಜಾನ್‌ ಡಿʼಸಿಲ್ವಾ ಭಾಗಿಯಾಗಲಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News