×
Ad

ಉಡುಪಿ ಜಿಲ್ಲೆಯಲ್ಲಿ ಬಾಲಕಿಯರ ಎರಡು ಹೊಸ ಹಾಸ್ಟೆಲ್ ಉದ್ಘಾಟನೆ

Update: 2025-01-31 21:11 IST

ಉಡುಪಿ: ಬಾಲಕಿಯರಿಗಾಗಿ ಉಡುಪಿ ನಗರದಲ್ಲಿ ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಉದ್ಘಾಟನೆ ಇಂದು ನೆರವೇರಿತು.

ಸಮಾಜ ಕಲ್ಯಾಣ ಇಲಾಖೆಯು ಉಡುಪಿ ನಗರದ ಬನ್ನಂಜೆಯಲ್ಲಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಕಚೇರಿ ಬಳಿಯಲ್ಲಿ ನೂತನವಾಗಿ ನಿರ್ಮಿಸಿದ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಶಾಸಕ ಯಶ್‌ಪಾಲ್ ಸುವರ್ಣ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ, ಜಿಪಂ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ಪೌರಾಯುಕ್ತ ಉದಯ್ ಶೆಟ್ಟಿ, ನಗರಸಭೆ ಸದಸ್ಯೆ ಸವಿತಾ ಹರೀಶ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ನಾರಾಯಣಸ್ವಾಮಿ ಹಾಗೂ ಇತರರು ಉಪಸ್ಥಿತರಿದ್ದರು.

ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಗರದ ಕಾಡಬೆಟ್ಟುನಲ್ಲಿ ನೂತನವಾಗಿ ನಿರ್ಮಿಸಿದ ಪರಿಶಿಷ್ಟ ವರ್ಗದ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಸಹ ಶಾಸಕರೇ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ, ಜಿಪಂ ಉಪ ಕಾರ್ಯದರ್ಶಿ ಶ್ರೀನಿವಾಸ ರಾವ್, ಪೌರಾಯುಕ್ತ ಉದಯ್ ಶೆಟ್ಟಿ ಹಾಗೂ ಇತರರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News