×
Ad

ಉಡುಪಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Update: 2023-09-04 19:43 IST

ಉಡುಪಿ, ಸೆ.4: ಅಲೆವೂರಿನ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಆಶ್ರಯದಲ್ಲಿ ಇತ್ತೀಚೆಗೆ ನಡೆದ ಉಡುಪಿ ತಾಲೂಕು ಮಟ್ಟದ ಅಂತರ್ ಶಾಲಾ ಬಾಲಕ-ಬಾಲಕಿಯರ ತ್ರೋಬಾಲ್ ಪಂದ್ಯಾಟವನ್ನು ಅಲೆವೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಅಮೃತಾ ಯು.ಪೂಜಾರಿ ಉದ್ಘಾಟಿಸಿದರು.

ಉಡುಪಿ ತಾಲೂಕು ಪ್ರಾಥಮಿಕ ಮತ್ತು ಪ್ರೌಢಶಾಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಸುವರ್ಣ ಮತ್ತು ಶಾಲಾ ಆಡಳಿತ ಮಂಡಳಿ ಅಲೆವೂರು ಗ್ರೂಪ್ ಫೋರ್ ಎಜುಕೇಶನ್‌ನ ಕೋಶಾಧಿಕಾರಿ ಅಲೆವೂರು ಹರೀಶ್ ಕಿಣಿ ಅತಿಥಿಗಳಾಗಿದ್ದರು. ಶಾಲಾ ಮುಖ್ಯೋಪಾಧ್ಯಾಯಿನಿ ರೂಪಾ ಡಿ.ಕಿಣಿ, ಸಾಯಿ ಪ್ರಸಾದ್ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ(ಪ್ರಭಾರ) ಗೋಪಾಲ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಂತಿನಿಕೇತನ ಶಾಲಾ ಸಂಚಾಲಕ ಅಲೆವೂರು ದಿನೇಶ್ ಕಿಣಿ ಸ್ವಾಗತಿಸಿದರು. ಶಾಲಾ ಶಿಕ್ಷಕ ಅನೀಶ್ ಕುಮಾರ್ ಕಾರ್ಯಕ್ರಮ ನಿರೂಪಿಸಿ, ಶಿಕ್ಷಕಿ ಉಷಾಲತಾ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News