ಉಡುಪಿ ಶ್ರೀಕೃಷ್ಣ ಮಠದಲ್ಲಿ ಸ್ವಾತಂತ್ರ್ಯ ದಿನಾಚರಣೆ
Update: 2024-08-15 17:51 IST
ಉಡುಪಿ : ಉಡುಪಿಯ ಶ್ರೀಕೃಷ್ಣ ಮಠದ ಗೀತಾಮಂದಿರದಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಸ್ವಾಮೀಜಿ ನೆರವೇರಿಸಿದರು.
ಪುತ್ತಿಗೆ ಮಠದ ಕಿರಿಯ ಯತಿ ಶ್ರೀಸುಶ್ರೀಂದ್ರ ತೀರ್ಥ ಸ್ವಾಮೀಜಿ ಉಪಸ್ಥಿತರಿದ್ದರು. ಸುಗುಣ ಶಾಲೆಯ ಮಕ್ಕಳಿಂದ ದೇಶಭಕ್ತಿ ಗಾಯನ ಕಾರ್ಯಕ್ರಮ ನಡೆಯಿತು. ಕೃಷ್ಣ ಮಠದ ಭಕ್ತರು, ಪುತ್ತಿಗೆ ಮಠದ ದಿವಾನರು, ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.