×
Ad

‘ವ್ಯಕ್ತಿತ್ವ ವಿಕಸನ -ಜೀವನ ಮೌಲ್ಯಗಳು’ ಮಾಹಿತಿ ಶಿಬಿರ

Update: 2023-09-23 18:10 IST

ಬ್ರಹ್ಮಾವರ, ಸೆ.23: ಹಂಗಾರಕಟ್ಟೆ ಬಾಳ್ಕುದ್ರು ಅಭಿವೃದ್ಧಿ ಸಂಸ್ಥೆ, ಬಸ್ರೂರು ಸರಕಾರಿ ಪ್ರೌಢಶಾಲೆ ಮತ್ತು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಹಾಗೂ ಬಸ್ರೂರು ಗ್ರಾಪಂಗಳ ಸಂಯುಕ್ತ ಆಶ್ರಯದಲ್ಲಿ ವ್ಯಕ್ತಿತ್ವ ವಿಕಸನ ಮತ್ತು ಜೀವನ ಮೌಲ್ಯಗಳು ಮಾಹಿತಿ ಶಿಬಿರವನ್ನು ಇತ್ತೀಚೆಗೆ ಬಸ್ರೂರು ಶಾಲೆಯಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ಬಸ್ರೂರು ಗ್ರಾಪಂ ಅಧ್ಯಕ್ಷ ಬೇಳೂರು ದಿನಕರ ಶೆಟ್ಟಿ ಉದ್ಘಾಟಿಸಿ ದರು. ಅಧ್ಯಕ್ಷತೆಯನ್ನು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸತೀಶ್ ನಾಯಕ್ ವಹಿಸಿ ದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜ್ಯೋತಿ ಬಿ. ಮಾತನಾಡಿದರು. ಗ್ರಾಪಂ ಸದಸ್ಯರಾದ ಸುಮತಿ ಶಂಕರ್ ಮೆಂಡನ್, ಕಮಲ ಶೆಟ್ಟಿಗಾರ್, ಸಹ ಶಿಕ್ಷಕ ವರ್ಷ, ಸಂಪನ್ಮೂಲ ವ್ಯಕ್ತಿ ಅಬ್ದುಲ್ ರವೂಫ್ ಉಪಸ್ಥಿತರಿದ್ದರು.

ಅಭಿವೃದ್ಧಿ ಸಂಸ್ಥೆಯ ಕಾರ್ಯದರ್ಶಿ ರಮೇಶ್ ವಕ್ವಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹ ಶಿಕ್ಷಕರಾದ ಪ್ರಶಾಂತ್ ಸ್ವಾಗತಿಸಿ, ಪ್ರಕಾಶ್ ವಂದಿಸಿ, ಶ್ರೀಕಾಂತ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಸುಮಾರು 149 ವಿದ್ಯಾರ್ಥಿಗಳು ಶಿಬಿರದ ಪ್ರಯೋಜನ ಪಡೆದುಕೊಂಡರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News