ಮಣಿಪಾಲ ಆಸ್ಪತ್ರೆಯ ನಾಲ್ಕನೆ ಮಹಡಿಯಿಂದ ಹಾರಿದ ಒಳರೋಗಿ !
ಮಣಿಪಾಲ, ಸೆ.30: ಮಣಿಪಾಲ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಒಳ ರೋಗಿಯೊಬ್ಬ ಮಹಡಿಯಿಂದ ಹಾರಿ ಗಂಭೀರವಾಗಿ ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ವೇಳೆ ನಡೆದಿದೆ.
ಗಾಯಗೊಂಡ ವ್ಯಕ್ತಿಯನ್ನು ತೀರ್ಥಹಳ್ಳಿಯ ರಾಜೇಶ್ ಆರ್.ಶೆಟ್ಟಿ ಎಂದು ಗುರುತಿಸಲಾಗಿದೆ. ಇವರು ಕೆಲ ಸಮಯದ ಹಿಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ಮಣಿಪಾಲ ಆಸ್ಪತ್ರೆಗೆ ದಾಖಲಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆನ್ನಲಾಗಿದೆ.
ಇಂದು ಆಸ್ಪತ್ರೆಯ ನಾಲ್ಕನೇ ಮಹಡಿಯ ಕಿಟಕಿ ಮೂಲಕ ಪರಾರಿಯಾಗಲು ಯತ್ನಿಸಿದ ರಾಜೇಶ್ ಶೆಟ್ಟಿ, ಆಯಾ ತಪ್ಪಿ ಕೆಳಗೆ ಬಿದ್ದು ಗಾಯಗೊಂಡರೆಂದು ತಿಳಿದುಬಂದಿದೆ. ಇವರು ಇದೀಗ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಸಾಮಾಜಿಕ ಜಾಲ ತಾಣಗಳಲ್ಲಿ ವೈರಲ್ ಆಗಿದೆ.