×
Ad

ಉಡುಪಿ ಜಿಲ್ಲೆಯಾದ್ಯಂತ ಸಂಚರಿಸುವ ಬಸ್‌ಗಳಿಗೆ ಬಾಗಿಲು ಅಳವಡಿಕೆ ಕಡ್ಡಾಯ: ಆರ್‌ಟಿಒ

Update: 2025-12-20 19:25 IST

ಫೈಲ್‌ ಫೋಟೊ 

ಉಡುಪಿ, ಡಿ.20: ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ನಿರ್ದೇಶನದಂತೆ ಮೋಟಾರು ವಾಹನ ನಿಯಮಾವಳಿಗಳನ್ವಯ ಜಿಲ್ಲೆಯಾದ್ಯಂತ ಸಂಚರಿಸುವ ಎಲ್ಲಾ ಖಾಸಗಿ ಹಾಗೂ ಸರಕಾರಿ ಬಸ್ಸುಗಳಲ್ಲಿ 2026ರ ಜನವರಿ 20ರ ಒಳಗೆ ಕಡ್ಡಾಯವಾಗಿ ಬಾಗಿಲು (ಡೋರ್) ಅಳವಡಿಸಿಕೊಂಡು ಸಂಚರಿಸುವಂತೆ ಎಲ್ಲಾ ಬಸ್ಸುಗಳ ಮಾಲಕರಿಗೆ ಸೂಚನೆ ನೀಡಲಾಗಿದೆ.

ತಪ್ಪಿದ್ದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News