×
Ad

ಶೀರೂರು ಪರ್ಯಾಯಕ್ಕೆ ಡಿ.ಕೆ.ಶಿವಕುಮಾರ್‌ಗೆ ಆಮಂತ್ರಣ

Update: 2026-01-10 21:11 IST

ಉಡುಪಿ: ಜ.18ರಂದು ನಡೆಯುವ ಶ್ರೀಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯ ಮಹೋತ್ಸವಕ್ಕೆ ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಮಂಗಳೂರಿನಲ್ಲಿ ಭೇಟಿ ಮಾಡಿ ಆಹ್ವಾನಿಸಿದರು.

ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಈ ಬಾರಿ ಪರ್ಯಾಯ ಪೀಠಾರೋಹಣ ಮಾಡಲಿದ್ದು, ಯಶಪಾಲ್ ಸುವರ್ಣ ಅವರು ಶೀರೂರು ಪರ್ಯಾಯದ ಆಮಂತ್ರಣ ಪತ್ರಿಕೆಯನ್ನು ನೀಡಿ ಡಿಕೆಶಿ ಅವರನ್ನು ಪರ್ಯಾಯಕ್ಕೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಡಿಕೆಶಿ ಪರ್ಯಾಯದ ಕಾರ್ಯಕ್ರಮಗಳಲ್ಲಿ ಭಾಗವ ಹಿಸುವ ಇಚ್ಛೆಯನ್ನು ವ್ಯಕ್ತಪಡಿಸಿದರು. ಸ್ವಾಗತ ಸಮಿತಿ ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ವಿಷ್ಣುಮೂರ್ತಿ ಆಚಾರ್ಯ, ಪ್ರಚಾರ ಸಮಿತಿ ಸಂಚಾಲಕ ನಂದನ್ ಜೈನ್ ಈ ವೇಳೆ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News