ಜ.19, 20: ಉಡುಪಿ ಜಿಲ್ಲಾ ಸರಕಾರಿ ನೌಕರರ ಕ್ರೀಡಾಕೂಟ
ಉಡುಪಿ, ಜ.17: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಉಡುಪಿ ಜಿಲ್ಲಾ ಶಾಖೆಗಲ ಸಂಯುಕ್ತ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 19 ಮತ್ತು 20ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜ.19ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಕರಾವಳಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಶಾಸಕರಾದ ವಿ.ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ. ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರಾದ ಮಂಜುನಾಥ್ ಭಂಡಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಂ ಶಂಕರ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.