ಕೋಟ | ಆಸಾಡಿ ಒಡ್ರ್ ಸಾಧಕ ಮಹಿಳಾ ಪುರಸ್ಕಾರಕ್ಕೆ ಜ್ಯೋತಿ ಸಾಲಿಗ್ರಾಮ ಆಯ್ಕೆ
ಕೋಟ : ಕೋಟ ಪಂಚವರ್ಣ ಮಹಿಳಾ ಮಂಡಲದ ಸಾದರ ಪಡಿಸುವ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಂಯೋಜನೆಯೊಂದಿಗೆ ನಡೆಯಲಿರುವ ಐದನೇ ವರ್ಷದ ಆಸಾಡಿ ಒಡ್ರ್ ಸಾಧಕ ಪುರಸ್ಕಾರಕ್ಕೆ ರೇಡಿಯೋ ಕುಂದಾಪ್ರ ಮೂಲಕ ಜನಜನಿತರಾದ ನಿರೂಪಕಿ ಜ್ಯೋತಿ ಸಾಲಿಗ್ರಾಮ ಆಯ್ಕೆಗೊಂಡಿದ್ದಾರೆ.
ಆ.9ರಂದು ಬೆಳಗ್ಗೆ 9ಗಂಟೆಯಿಂದ ಮಣೂರು ರಾಜಲಕ್ಷ್ಮೀ ಸಭಾಭವನದಲ್ಲಿ ನಡೆಯಲಿರುವ ವಿಶ್ವ ಕುಂದಾಪ್ರ ಕನ್ನಡ ದಿನದ ಅಂಗವಾಗಿ ಹಮ್ಮಿಕೊಳ್ಳಲಿರುವ ಆಸಾಡಿ ಒಡ್ರ್ ಕಾರ್ಯಕ್ರಮದಲ್ಲಿ ಈ ಪುರಸ್ಕಾರ ನೀಡಿ ಗೌರವಿಸಲಾಗುವುದು. ವಿಶೇಷ ಆಹ್ವಾನಿತರಾಗಿ ಕುಂದಗನ್ನಡ ರಾಯಬಾರಿ ಮನು ಹಂದಾಡಿ(ಮನೋಹರ್ ಶೆಟ್ಟಿ) ಭಾಗವಹಿಸಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮೀಣ ತಿನಿಸುಗಳು, ಪರಿಕರ ಪ್ರದರ್ಶನ, ಸ್ಪರ್ಧೆ ಸ್ನೇಹಕೂಟ ಮಣೂರು ಇವರುಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಲಿದೆ. ಸ್ನೇಹಕೂಟ ಮಣೂರು ಈ ಕಾರ್ಯಕ್ರಮಕ್ಕೆ ಸಹಕಾರ ನೀಡಲಿದೆ ಎಂದು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.