×
Ad

ಲೋಕಸಭಾ ಚುನಾವಣೆ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಕೆ

Update: 2024-04-03 12:08 IST

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಜಯಪ್ರಕಾಶ್ ಹೆಗ್ಡೆ ಇಂದು ನಾಮಪತ್ರ ಸಲ್ಲಿಸಿದರು.

ಉಡುಪಿ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾವೇಶದ ಬಳಿಕ ಮುಖಂಡರ ಜೊತೆ ತೆರಳಿದ ಜಯಪ್ರಕಾಶ್ ಹೆಗ್ಡೆ ಅವರಿಂದ ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾ ಕುಮಾರಿ ಅವರು ನಾಮಪತ್ರ ಸ್ವೀಕರಿಸಿದರು.

ಈ ಸಂಧರ್ಭದಲ್ಲಿ ಸಚಿವ ಕೆ.ಜೆ.ಜಾಜ್೯, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಮಾಜಿ ಸಚಿವೆ ಮೋಟಮ್ಮ, ಚಿಕ್ಕಮಗಳೂರು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಅಂಶುಮಂತ್ ಹಾಜರಿದ್ದರು.

ಕರಾವಳಿ, ಮಲೆನಾಡು, ಬಯಲು ಸೀಮೆಯ ಸಮಸ್ಯೆ ಪರಿಹಾರಕ್ಕೆ ಮೊದಲ ಆದ್ಯತೆ

ಲೋಕಸಭಾ ಚುನಾವಣೆಯಲ್ಲಿ ಸಂಸದನಾಗಿ ಆಯ್ಕೆಯಾದರೆ ಕರಾವಳಿ, ಮಲೆನಾಡು ಹಾಗೂ ಬಯಲು ಸೀಮೆ ಭಾಗದ ಸಮಸ್ಯೆಗಳ ಪರಿಹಾರಕ್ಕೆ ಪ್ರಥಮ ಆದ್ಯತೆ ನೀಡುವುದಾಗಿ  ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದರು.

ನಾಮಪತ್ರ ಸಲ್ಲಿಸಲು ತೆರಳುವ ಮುನ್ನ ಬ್ರಹ್ಮ ಗಿರಿಯ ಕಾಂಗ್ರೆಸ್ ಭವನದಲ್ಲಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News