×
Ad

ಶಂಕರ ಸಿಹಿಮೊಗ್ಗೆಗೆ ಕಡೆಂಗೋಡ್ಲು ಕಾವ್ಯ ಪ್ರಶಸ್ತಿ ಪ್ರದಾನ

Update: 2023-08-05 20:21 IST

ಉಡುಪಿ: ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ ಇವರ ಸಂಯುಕ್ತ ಆಶ್ರಯದಲ್ಲಿ ೨೦೨೨ನೆ ಸಾಲಿನ ಕೇಶವ ಭಟ್ಟ ಪ್ರಶಸ್ತಿಯನ್ನು ಡಾ.ಹರಿಕೃಷ್ಣ ಭರಣ್ಯ ಮತ್ತು ೨೦೨೩ನೆ ಸಾಲಿನ ಪ್ರಶಸ್ತಿಯನ್ನು ಡಾ.ಎನ್.ಆರ್.ನಾಯಕ್ ಹಾಗೂ ಕಡೆಂಗೋಡ್ಲು ಕಾವ್ಯ ಪ್ರಶಸ್ತಿಯನ್ನು ಶಂಕರ ಸಿಹಿಮೊಗ್ಗೆ ಅವರಿಗೆ ಶನಿವಾರ ಉಡುಪಿ ಎಂಜಿಎಂ ಕಾಲೇಜಿನ ಗೀತಾಂಜಲಿ ಸಭಾಂಗಣದಲ್ಲಿ ಪ್ರದಾನ ಮಾಡಲಾಯಿತು.

ಮಣಿಪಾಲ ಕೆಎಂಸಿ ಡೀನ್ ಡಾ.ಪದ್ಮರಾಜ ಹೆಗ್ಡೆ ಕಡೆಂಗೋಡ್ಲು ಕವನ ಸಂಕಲನವನ್ನು ಬಿಡುಗಡೆಗೊಳಿಸಿದರು. ಬೆಂಗಳೂರಿನ ವಿಶ್ರಾಂತ ಕನ್ನಡ ಪ್ರಾಧ್ಯಾಪಕಿ ಡಾ.ಪ್ರಮೀಳಾ ಮಾಧವ ‘ಗಿರಿಜ ಕಲ್ಯಾಣ- ಮರು ಓದು’ ವಿಷಯದ ಕುರಿತು ಉಪನ್ಯಾಸ ನೀಡಿದರು

ಅಧ್ಯಕ್ಷತೆಯನ್ನು ಎಂಜಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ಲಕ್ಷ್ಮೀ ನಾರಾಯಣ ಕಾರಂತ ಅಧ್ಯಕ್ಷತೆ ವಹಿಸಿದ್ದರು. ಅಜ್ಜರಕಾಡು ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಅಧ್ಯಯನ ಕೇಂದ್ರದ ಪ್ರಾಧ್ಯಾಪಕ ಡಾ. ರವಿರಾಜ್ ಶೆಟ್ಟಿ ಪ್ರಶಸ್ತಿ ಪ್ರಶಸ್ತಿ ವಿಜೇತ ಕವನ ಸಂಕಲನ ‘ಇರುವೆ ಮತ್ತು ಗೋಡೆ’ ಕುರಿತು ಪರಿಚಯ ಮಾಡಿದರು.

ಹಿರಿಯ ಸಾಹಿತಿ ಡಾ.ತಾಳ್ತಜೆ ವಸಂತ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ.ಜಗದೀಶ್ ಶೆಟ್ಟಿ ಸ್ವಾಗತಿಸಿದರು. ಎಂಜಿಎಂ ಕಾಲೇಜಿನ ಉಪನ್ಯಾಸಕ ರಾಘವೇಂದ್ರ ತುಂಗ ವಂದಿಸಿ, ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News