×
Ad

ಸೆ.26ರಿಂದ ಅ.25ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಉಡುಪಿ ಜಿಲ್ಲಾಧಿಕಾರಿ

Update: 2023-09-21 20:14 IST

ಉಡುಪಿ, ಸೆ.21: ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾ ಗಿರುವ ಕಾಲು ಬಾಯಿ ರೋಗದ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ 4ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮ ವನ್ನು ಉಡುಪಿ ಜಿಲ್ಲೆಯಾದ್ಯಂತ ಸೆ.26ರಿಂದ ಅಕ್ಟೋಬರ್ 25ರವರೆಗೆ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾಕುಮಾರಿ ಹೇಳಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿ ಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಅವಧಿಯಲ್ಲಿ ಯಾವುದಾದರೂ ಜಾನುವಾರುಗಳಿಗೆ ಲಸಿಕೆ ನೀಡದೆ ಬಿಟ್ಟು ಹೋದಲ್ಲಿ ಅಂತಹ ಜಾನುವಾರು ಮಾಲಕರು ಸಮೀಪದ ಪಶುವೈದ್ಯರನ್ನು ಸಂಪರ್ಕಿಸಿ ಕಡ್ಡಾಯವಾಗಿ ಜಾನುವಾರುಗಳಿಗೆ ಲಸಿಕೆ ಹಾಕಿಸುವಂತೆ ಸೂಚಿಸಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ಡಾ. ಶಂಕರ್ ಶೆಟ್ಟಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News