×
Ad

ಕಂಚಿನಡ್ಕ: ಟೋಲ್ ಕೇಂದ್ರ ರದ್ದುಗೊಳಿಸಲು ಆಗ್ರಹಿಸಿ ಪ್ರತಿಭಟನೆ

Update: 2024-08-24 11:22 IST

ಪಡುಬಿದ್ರಿ: ಪಡುಬಿದ್ರಿ-ಕಾರ್ಕಳ ರಾಜ್ಯ ಹೆದ್ದಾರಿಯ ಕಂಚಿನಡ್ಕದಲ್ಲಿ ನಿರ್ಮಿಸಲು ಉದ್ದೇಶಿಸಿರುವ ಟೋಲ್ ಕೇಂದ್ರವನ್ನು ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಂಚಿನಡ್ಕದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.

ವಿವಿಧೆಡೆಗಳಿಂದ ಭಾರೀ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ವಿವಿಧ ಸಂಘಟನೆಗಳು ಬೆಂಬಲ ಸೂಚಿಸಿವೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ʼಈಗಾಗಲೇ ಲೋಕೋಪಯೋಗಿ ಇಲಾಖೆ ಸಚಿವರು ಆದೇಶ ಹೊರಡಿಸಿದ್ದಾರೆ. ಈ ಅದೇಶ ಶಾಶ್ವತ ರದ್ದಾಗಬೇಕು. ಈ ಬಗ್ಗೆ ಸಚಿವರನ್ನು ಭೇಟಿ ಮಾಡಿ ಒತ್ತಾಯಿಸಲಾಗುವುದು ಎಂದರು.

 ಪಡುಬಿದ್ರಿ, ಬೆಳ್ಮಣ್, ಕಾರ್ಕಳ ರಾಜ್ಯ ಹೆದ್ದಾರಿಯ 40 ಗ್ರಾಮಗಳ ಜನರು ರಿಕ್ಷಾ, ಕಾರು, ಟೆಂಪೋ, ಲಾರಿ, ಬಸ್ಸು ಮಾಲಕರು, ವ್ಯಾಪಾರಸ್ಥರು ಬಂದ್ ಮಾಡುವ‌ ಮೂಲಕ ಪ್ರತಿಭಟನೆಯಲ್ಲಿ ಪಾಲ್ಗೊಂಡರು.


Delete Edit


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News