×
Ad

ಕಾಂತರಾಜು ವರದಿ | ಸರ್ಕಾರಕ್ಕೆ ಸಲ್ಲಿಕೆ ಬಳಿಕ ಪರಿಶೀಲನೆ: ಸಿಎಂ ಸಿದ್ದರಾಮಯ್ಯ

Update: 2023-08-01 13:00 IST

ಉಡುಪಿ, ಆ.1: ಹಿಂದುಳಿದ ವರ್ಗಗಳ ಮೀಸಲಾತಿ ಕುರಿತ ಕಾಂತರಾಜು ವರದಿ ಇನ್ನೂ ಸರ್ಕಾರಕ್ಕೆ ಸಲ್ಲಿಕೆ ಯಾಗಿಲ್ಲ. ಸಲ್ಲಿಸಿದ ಬಳಿಕ ಪರಿಶೀಲಿಸಿ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಂಗಳವಾರ ಉಡುಪಿ ಜಿಲ್ಲಾ ಭೇಟಿ ಗೆ ಆಗಮಿಸಿದ ಅವರು ಪಡುಬಿದ್ರಿ ಬೀಚ್ನಲ್ಲಿ ಕಡಲು ಕೊರೆತವನ್ನು ವೀಕ್ಷಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

'ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ವರದಿ ಸಲ್ಲಿಕೆಯಾಗಬೇಕಿತ್ತು. ಆದರೆ ಆಗಿಲ್ಲ. ಆಯೋಗ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ ಬಳಿಕ ಮುಂದಿನ ಕ್ರಮ' ಎಂದರು.

ಕರಾವಳಿಯಲ್ಲಿ ಮಳೆಗಾಲದಲ್ಲಿ ಕಡಲಕೊರೆತ ಸಾಮಾನ್ಯವಾಗಿದ್ದು, ಈ ಬಗ್ಗೆ ಶಾಶ್ವತ ಪರಿಹಾರಕ್ಕಾಗಿ ಕ್ರಿಯಾಯೋಜನೆ ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News