×
Ad

ಕಾಪು: ಡಿವೈಡರ್‌ಗೆ ಕಾರು ಢಿಕ್ಕಿ; ನಾಲ್ವರಿಗೆ ಗಾಯ

Update: 2024-05-28 15:15 IST

ಕಾಪು: ಕಾರೊಂದು ಡಿವೈಡರ್‌ಗೆ ಢಿಕ್ಕಿ ಹೊಡೆದು ಉರುಳಿದ ಪರಿಣಾಮ ಮಣಿಪಾಲದ 4 ಮಂದಿ ಎಂಐಟಿ ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಕೊಪ್ಪಲಂಗಡಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ಮಣಿಪಾಲದಿಂದ ಮಂಗಳೂರು ಕಡೆ ಹೋಗುತ್ತಿದ್ದ ವೇಳೆ ಘಟನೆ ಉಂಟಾಗಿದ್ದು, ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಕಾರಿನಲ್ಲಿದ್ದ 4 ಮಂದಿ ವಿದ್ಯಾರ್ಥಿಗಳ ತಲೆಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯರು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ವಿದ್ಯಾರ್ಥಿಗಳ ಪೈಕಿ ಓರ್ವ ಇಂದ್ರಾಳಿಯವನಾಗಿದ್ದು, ಉಳಿದಂತೆ ಮೂವರು ದೆಹಲಿ ಹಾಗು ಇನ್ನಿತರ ರಾಜ್ಯದವರಾಗಿದ್ದಾರೆ ಎಂದು ಕಾಪು ಪೊಲೀಸರು ತಿಳಿಸಿದ್ದಾರೆ.

ಉಚ್ಚಿಲದ ಜಲಾಲುದ್ದೀನ್, ಉಚ್ಚಿಲದ ಆಂಬ್ಯುಲೆನ್ಸ್ ಚಾಲಕ ಸಿರಾಜ್ ಎರ್ಮಾಳ್, ನವಾಝ್ ಸೇರಿದಂತೆ ಯುವಕರ ತಂಡ ಗಾಯಗೊಂಡವರನ್ನು ರಕ್ಷಣೆ ಮಾಡಿದ್ದು, ಆಂಬ್ಯುಲೆನ್ಸ್ ಮೂಲಕ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News