×
Ad

ನೆರೆ ಸಂತ್ರಸ್ತರಿಗೆ ಗರಿಷ್ಠ ಪರಿಹಾರಕ್ಕೆ ಸಿಎಂಗೆ ಕಾಪು ಶಾಸಕರ ಪತ್ರ

Update: 2023-07-26 19:25 IST

ಗುರ್ಮೆ ಸುರೇಶ್ ಶೆಟ್ಟಿ

ಕಾಪು, ಜು.26: ಅತಿವೃಷ್ಟಿ ಹಾಗೂ ಪ್ರವಾಹದಿಂದ ಭಾಧಿತರಾದ ನೆರೆ ಸಂತ್ರಸ್ಥರಿಗೆ ಗರಿಷ್ಠ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಪತ್ರ ಬರೆದು ಮನವಿ ಮಾಡಿದ್ದಾರೆ.

ಕಾಪು ವಿಧಾನಸಭಾ ಕ್ಷೇತ್ರದ ಬಹುಭಾಗ ಕಡಲ ಪ್ರದೇಶಗಳಿಗೆ ಹೊಂದಿ ಕೊಂಡಿದ್ದು, ಈ ಭಾಗದಲ್ಲಿ ಹಲವು ಜನರು ವಾಸ್ತವ್ಯ ಮಾಡಿಕೊಂಡಿದ್ದಾರೆ. ಜೂನ್ ತಿಂಗಳಿನಿಂದ ಚಂಡಮಾರುತ ಹಾಗೂ ತೀವ್ರ ಸುರಿದ ಮಳೆಯಿಂದಾಗಿ ಅತಿವೃಷ್ಟಿ ಉಂಟಾಗಿದ್ದು, ಜನರ ಆಸ್ತಿ-ಪಾಸ್ತಿಗಳು ನಷ್ಟ ಉಂಟಾಗಿದೆ. ಪ್ರವಾಹ ದಿಂದ ನೀರು ನುಗ್ಗಿರುವ ಮನೆಗಳ ಗೃಹಪಯೋಗಿ ವಸ್ತುಗಳು, ಬಟ್ಟೆ ಬರೆಗಳಿಗೆ ಹಾನಿ ಉಂಟಾಗಿದೆ. ಅಲ್ಲದೇ ತೀವ್ರ ತರಹದ ಮಳೆಯಿಂದ ವಾಸ್ತವ್ಯದ ಮನೆ ಭಾಗಶಃ ಹಾಗು ಪೂರ್ಣ ಹಾನಿಯಾಗಿದ್ದು, ಪರಿಹಾರ ನೀಡುವುದು ತೀರಾ ಅತ್ಯವಶ್ಯಕತೆ ಇರುತ್ತದೆ.

ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೀಡಾದ ಮನೆಗಳ ಪುನರ್ ನಿರ್ಮಾಣಕ್ಕೆ ಎ ಕೆಟಗರಿ ಅಡಿ 5 ಲಕ್ಷ ರೂ. ಪರಿಹಾರ ಹಾಗೂ ಮನೆಗಳ ಭಾಗಶಃ ರಿಪೇರಿಗೆ ಬಿ ಕೆಟಗರಿ ಅಡಿ 3 ಲಕ್ಷ ರೂ. ಮತ್ತು ಗೃಹಪಯೋಗಿ ವಸ್ತುಗಳ ಹಾನಿಗೆ ಸಿ ಕೆಟಗರಿ ಅಡಿ 50 ಸಾವಿರ ರೂ. ಅನುದಾನ ಸಂತ್ರಸ್ತರಿಗೆ ದೊರಕುತ್ತಿತ್ತು. ಆದ್ದರಿಂದ ಈ ಹಿಂದಿನಂತೆಯೇ ಸಂತ್ರಸ್ತರಿಗೆ ಗರಿಷ್ಠ ಪರಿಹಾರ ಧನ ಮಂಜೂರು ಮಾಡುವಂತೆ ಅವರು ಪತ್ರದಲ್ಲಿ ಒತ್ತಾಯಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News