ಕಾಪು | ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ, ಗ್ರಂಥಾಲಯ ಉದ್ಘಾಟನೆ
Update: 2025-11-12 17:19 IST
ಕಾಪು, ನ.12: ಮಜೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೂರು ಗ್ರಾಮ ಆಡಳಿತಾಧಿಕಾರಿ ಕಚೇರಿ, ಪ್ರಯಾಣಿಕರ ತಂಗುದಾಣ ಹಾಗೂ ಗ್ರಂಥಾಲಯದ ಉದ್ಘಾಟನೆಯನ್ನು ಇಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.
ಉಳಿಯಾರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಹೋಗುವ ರಸ್ತೆಗೆ ಉಳಿಯಾರು ದಿ.ಪದ್ಮನಾಭ ಉಪಾಧ್ಯಾಯರ ಮಾರ್ಗ ನಾಮಕರಣ ಮಾಡಲಾಗಿದ್ದು ಶಾಸಕರು ಇದರ ನಾಮ ಫಲಕದ ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಜೂರು ಗ್ರಾಪಂ ಅಧ್ಯಕ್ಷ ಪ್ರಸಾದ್ ಶೆಟ್ಟಿ ವಳದೂರು, ಉಪಾಧ್ಯಕ್ಷ ಮಂಜುಳಾ ಆಚಾರ್ಯ, ಜಿಪಂ ಮಾಜಿ ಸದಸ್ಯೆ ಶಿಲ್ಪಾ ಜಿ.ಸುವರ್ಣ, ತಾಪಂ ಮಾಜಿ ಸದಸ್ಯೆ ಶಶಿಪ್ರಭಾ, ಕಾಪು ತಾಲೂಕು ಕಾರ್ಯನಿರ್ವಹಣಾಧಿಕಾರಿ ಜೇಮ್ಸ್ ಡಿಸಿಲ್ವ, ಕಾಪು ಕಂದಾಯ ನಿರೀಕ್ಷಕ ಶಭೀರ್ ಹಾಗೂ ಮಜೂರು ಗ್ರಾಮ ಪಂಚಾಯತ್ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.