×
Ad

ಕಾಪು: ಕಾಂಗ್ರೆಸ್ ಹಿರಿಯ ಮುಖಂಡ ವಿನಯ ಬಲ್ಲಾಳ್ ನಿಧನ

Update: 2024-08-27 21:56 IST

ಕಾಪು: ಕಾಂಗ್ರೆಸ್ ಹಿರಿಯ ಮುಖಂಡ, ಪ್ರತಿಷ್ಠಿತ ಕಟಪಾಡಿ ಬೀಡು ಮನೆತನದ ವಿನಯ ಬಲ್ಲಾಳ್ (63) ಇಂದು ಹೃದಯಾಘಾತ ದಿಂದ ನಿಧನರಾದರು.

ಸಜ್ಜನ ರಾಜಕಾರಣಿ, ನಿಷ್ಠಾವಂತ ಹಿರಿಯ ಕಾಂಗ್ರೆಸ್ಸಿಗ, ಐದು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಕಟಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ, ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಇವರು, ಪ್ರಸ್ತುತ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಇವರ ನಿಧನಕ್ಕೆ ಮಾಜಿ ಸಚಿವ ವಿನಯಕುಮಾರ್ ಸೊರಕೆ, ಕಾಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನವೀನ್ ಚಂದ್ರ ಸುವರ್ಣ‌ ಸಂತಾಪ ವ್ಯಕ್ತಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News