ಕಾಪು : ಕಾಪು ತಾಲ್ಲೂಕು ಆಡಳಿತದ ವತಿಯಿಂದ ಕಾಪು ತಾಲ್ಲೂಕು ಮಟ್ಟದ ೭೧ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ತಹಶೀಲ್ದಾರ್ ಅನಂತ ಶಂಕರ ಬಿ ಧ್ವಜಾರೋಹಣ ನೆರವೇರಿಸಿದರು.

ಬಳಿಕ ಮಾತನಾಡಿ, ಕನ್ನಡ ನಾಡಿನ ಇತಿಹಾಸ, ಏಕೀಕರಣದ ಹೋರಾಟ ಹಾಗೂ ಕನ್ನಡಿಗರ ಸ್ವಾಭಿಮಾನದ ಮಹತ್ವವನ್ನು ಸ್ಮರಿಸಿದ ಅವರು, ನಾಡಿನ ಪರಂಪರೆ ಮತ್ತು ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಕನ್ನಡಿಗರ ಸ್ವಾಭಿಮಾನವನ್ನು ಜಾಗೃತಗೊಳಿಸುವುದರ ಜತೆಗೆ ನಾಡಿನ ನೆಲ, ಜಲ, ಭಾಷೆ ಮತ್ತು ಸಂಸ್ಕೃತಿಯ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯವಾಗಬೇಕು. ಏಕೀಕರಣ ಚಳವಳಿಯ ಫಲವಾಗಿ ಅಸ್ತಿತ್ವಕ್ಕೆ ಬಂದ ಕರ್ನಾಟಕ ರಾಜ್ಯದ ಏಕತೆ, ಸಮೃದ್ಧಿ ಹಾಗೂ ಸಾಮರಸ್ಯವನ್ನು ಉಳಿಸಿಕೊಂಡು ಅಭಿವೃದ್ಧಿ ಹೊಂದಿದ ನಾಡನ್ನು ಕಟ್ಟುವ ಸಂಕಲ್ಪ ನಮ್ಮದಾಗಬೇಕು ಎಂದರು.

ಕಾಪು ಪುರಸಭಾ ಅಧ್ಯಕ್ಷೆ ಮೋಹಿನಿ ಶೆಟ್ಟಿ, ಉಪಾಧ್ಯಕ್ಷೆ ಸರಿತಾ, ಸ್ಥಾಯಿ ಸಮಿತಿ ಅಧ್ಯಕ್ಷ ಕಿರಣ್ ಆಳ್ವ, ದಂಡತೀರ್ಥ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ನೀಲಾನಂದ ನಾಯ್ಕ್ ಪ್ರಧಾನ ಭಾಷಣ ಮಾಡಿದರು.

ಕನ್ನಡ ಸಾಹಿತ್ಯ ಪರಿಷತ್ ಕಾಪು ತಾಲ್ಲೂಕು ಅಧ್ಯಕ್ಷ ಪುಂಡಲೀಕ ಮರಾಠೆ, ಕಾಪು ಪುರಸಭೆಯ ಮುಖ್ಯಾಧಿಕಾರಿ ಎನ್.ಎಮ್. ಮೇಸ್ತ, ಸರಕಾರಿ ನೌಕರರ ಸಂಘದ ಕಾಪು ತಾಲ್ಲೂಕು ಅಧ್ಯಕ್ಷ ಬಸವರಾಜ್, ಕ್ಷೇತ್ರ ಶಿಕ್ಷಣ ಸಂಯೋಜಕಿ ಅಶ್ವಿನಿ, ಪುರಸಭಾ ಸದಸ್ಯರಾದ ನೂರುದ್ದೀನ್, ಶೋಭಾ, ರಾಧಿಕಾ, ಶೈಲೇಶ್, ಉಮೇಶ್ ಕರ್ಕೇರ, ವಿದ್ಯಾಲತಾ, ಸರಿತಾ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಈ ಭಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಧನುಶ್ರೀ, ತೃಶಾ, ಪೂರ್ವಿ, ಸಾನ್ಜಿ ಜಿ. ಆಚಾರ್ಯ ಅವರನ್ನು ಅಭಿನಂದಿಸಲಾಯಿತು. ನಿವೃತ್ತ ಸರಕಾರಿ ಉದ್ಯೋಗಿ ಸ್ಟಾö್ಯನಿ ಅವರನ್ನು ಸನ್ಮಾನಿಸಲಾಯಿತು. ಪೊಲೀಸ್, ಎನ್‌ಸಿಸಿ, ಸೇವಾದಳ, ಸ್ಕೌಟ್ ಗೈಡ ಮಕ್ಕಳಿಂದ ಪಥ ಸಂಚಲನ, ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ನೃತ್ಯ ಪ್ರದರ್ಶನ ನಡೆಯಿತು.

ಕಾಪು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿಜಯ ಕುಮಾರ್ ಸ್ವಾಗತಿಸಿದರು. ಶಿಕ್ಷಕ ಶಿಬಣ್ಣ ಬಾಯರ್ ಕಾರ್ಯಕ್ರಮವನ್ನು ನಿರ್ವಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor