×
Ad

Karkala | ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

Update: 2026-05-09 15:46 IST

ಕಾರ್ಕಳ : ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘ (CITU) ಮತ್ತು ಕಾರ್ಕಳ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಇಂದು (ಶನಿವಾರ) ಕಾರ್ಕಳದಲ್ಲಿ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆಯನ್ನು ಕಾರ್ಕಳದ ಸಿಐಟಿಯು ಕಚೇರಿಯಲ್ಲಿ ಮಾಡಲಾಯಿತು.

ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಯಿಂದ ರಾಜ್ಯಾದ್ಯಂತ ಅಸಂಘಟಿತ ವಲಯದಲ್ಲಿ ದುಡಿಯುವ ಬೀಡಿ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುತ್ತಿದೆ. ಕಾರ್ಕಳದಲ್ಲಿ ಹಲವಾರು ಬೀಡಿ ಕಾರ್ಮಿಕರು ಇದ್ದು, ಮೊದಲ ಹಂತದ ಕಾರ್ಡ್ ಅನ್ನು ಕಾರ್ಮಿಕರಿಗೆ ನೀಡಲಾಯಿತು.

ʼಈ ಯೋಜನೆಯಲ್ಲಿ ಅಪಘಾತ ಪರಿಹಾರ, ಸಹಜ ಮರಣ ಪರಿಹಾರ ದೊರಕಲಿದೆ. ಸರಕಾರ ಇನ್ನೂ ಹೆಚ್ಚಿನ ಸವಲತ್ತುಗಳನ್ನು ನೀಡಬೇಕಾಗಿದೆ. ಕರ್ನಾಟಕ ರಾಜ್ಯದಲ್ಲಿ ಲಕ್ಷಾಂತರ ಬೀಡಿ ಕಾರ್ಮಿಕರು ಕಡಿಮೆ ವೇತನದಲ್ಲಿ ದುಡಿಯುತ್ತಿದ್ದು,  ಅವರಿಗೆ ಈ ಕಾರ್ಡ್ ತುಂಬಾ ಸಹಕಾರಿಯಾಗಲಿದೆ. ಮುಂದಿನ ದಿನಗಳಲ್ಲಿ ಈ ಯೋಜನೆ ಸಮರ್ಪಕವಾಗಿ ಜಾರಿ ಮಾಡಲು ಹೆಚ್ಚಿನ ಸವಲತ್ತುಗಳನ್ನು ಪಡೆಯಲು ಹೋರಾಟದ ಅಗತ್ಯ ವು ಇದೆʼ ಎಂದು ಕಾರ್ಕಳ ತಾಲೂಕು ಬೀಡಿ ಕಾರ್ಮಿಕರ ಸಂಘದ ಪ್ರಧಾನ ಕಾರ್ಯದರ್ಶಿ ಕವಿರಾಜ್.ಎಸ್. ಕಾಂಚನ್ ಕಾರ್ಮಿಕರಿಗೆ ಮಾಹಿತಿ ನೀಡಿದರು.

ಕಾರ್ಕಳ ಬೀಡಿ ಕಾರ್ಮಿಕ ಸಂಘದ ಅಧ್ಯಕ್ಷರಾದ ಸುನೀತಾ ಶೆಟ್ಟಿ, ಮತ್ತು ಸಿಐಟಿಯು ಮುಖಂಡರಾದ ಪುಷ್ಪ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News