ಕಾರ್ಕಳ: ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಮಸ್ತಕಾಭಿಷೇಕ ಮಹೋತ್ಸವದ ಶ್ರೀಮುಖ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿ ಕಚೇರಿ ಸಭಾಭವನದಲ್ಲಿ ನಡೆಯಿತು.

ಎಸ್ ಸಿ ಡಿ ಸಿ ಸಿ ಬ್ಯಾಂಕ್ ಅಧ್ಯಕ್ಷ, ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಸಮಿತಿ ಕಾರ್ಯಾಧ್ಯಕ್ಷ, ಸಹಕಾರರತ್ನ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಎಲಚಾರ್ಯ 108 ಶ್ರೀ ಪ್ರಸಂಗಸಾಗರ ಮುನಿ ಮಹಾರಾಜರ ಪಾವನ ಸಾನಿಧ್ಯದಲ್ಲಿ ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಸಮ್ಮುಖದಲ್ಲಿ ಮೂಡುಬಿದಿರೆ ಜೈನ ಮಠದ ಡಾ.ಚಾರುಕೀರ್ತಿ ಪಟ್ಟಾರಕ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿ ಬಿಡುಗಡೆಗೊಳಿಸಿದರು

ಈ ಸಂದರ್ಭ ಮಾತನಾಡಿದ ಡಾ.ಎಂ.ಎನ್.ರಾಜೇಂದ್ರ ಕುಮಾರ್, ದಾನದ ಮೂಲಕವೇ ಧಾರ್ಮಿಕ ಕಾರ್ಯಗಳು ಅತ್ಯಂತ ಸುಗಮವಾಗಿ ನಡೆಯುತ್ತವೆ. ಇದು ಕೇವಲ ಒಬ್ಬ ವ್ಯಕ್ತಿಯಿಂದ ಮಾತ್ರ ಸಾಧ್ಯವಿಲ್ಲ ಎಲ್ಲರೂ ಕೈ ಜೋಡಿಸಬೇಕು ಎಂದು ಕರೆ ನೀಡಿದರು.

ಇದುವರೆಗೆ ಅಟ್ಟಳಿಕೆ ನಿರ್ಮಾಣಕ್ಕೆ ಸರಕಾರದ ಅನುದಾನ ಸಿಕ್ಕಿದ್ದರೆ ಅದು ಈ ಬಾರಿಯ ಕಾರ್ಕಳ ಮಸ್ತಕಾಭಿಷೇಕಕ್ಕೆ ಮಾತ್ರ. ಕರ್ನಾಟಕ ಅಲ್ಪಸಂಖ್ಯಾತ ಇಲಾಖೆಯಿಂದ 10 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಮುಖ್ಯಮಂತ್ರಿ ನಿಧಿಯಿಂದ ವಿಶೇಷ ಅನುದಾನ, ಪೌರಾಡಳಿತ ಇಲಾಖೆಯಿಂದಲೂ ಅನುದಾನ ಬಿಡುಗಡೆಯಾಗಲಿದ್ದು, ಚರ್ತುಮುಖ ಬಸದಿಯಿಂದ ಗೋಮಟ್ಟ ಬೆಟ್ಟದವರೆಗೆ ಖಾಯಂ ವಿದ್ಯುತ್ ದೀಪ ವ್ಯವಸ್ಥೆ ಬಗ್ಗೆ ಕೂಡಾ ಚರ್ಚೆ ನಡೆಸಲಾಗಿದೆ ಎಂದರು.

ಮಾಜಿ ಸಚಿವ ಕೆ.ಅಭಯಚಂದ್ರ ಶುಭ ಹಾರೈಸಿದರು.

ಎಲಚಾರ್ಯ 108 ಶ್ರೀ ಪ್ರಸಂಗಸಾಗರ ಮುನಿ ಮಹಾರಾಜ, ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಹಾಗೂ

ಮೂಡುಬಿದಿರೆ ಜೈನ ಮಠದ ಡಾ.ಚಾರುಕೀರ್ತಿ ಪಟ್ಟರಕ ಪಂಡಿತಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಿ ಎಲ್ಲರ ಸಹಕಾರ ಕೋರಿದರು.

ಬಾಹುಬಲಿ ಮಹಾ ಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷ ಪಡುಬಿದ್ರೆ ಕಿನ್ಯಕ್ಕ ಅರಸರು, ಜೈನ್ ಕೋಶಾಧಿಕಾರಿ ಮೋಹನ್ ಪಾಡಿವಾಳ್, ಉಪಾಧ್ಯಕ್ಷ ಡಾ.ಜೀವಂದರ್ ಬಲ್ಲಾಳ್, ಅನಂತರಾಜ ಪೂವಣಿ ಉಪಸ್ಥಿತರಿದ್ದರು.

ಬಾಹುಬಲಿ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor