×
Ad

ಕಾರ್ಕಳ: ಸೆ.23ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ

Update: 2023-09-22 20:41 IST

ಕಾರ್ಕಳ : ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ಸೆ.23ರ ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಮಾಜಿ ಮುಖ್ಯಮಂತ್ರಿ ಡಾ.ಎಂ ವೀರಪ್ಪ ಮೊಯಿಲಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮಾಜಿ ಸಚಿವ ಅಭಯಚಂದ್ರ ಜೈನ್‌, ಕಾಂಗ್ರೆಸ್ ಮುಖಂಡ ಉದಯ್ ಶೆಟ್ಟಿ ಮುನಿಯಾಲು, ಜಿಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮತ್ತಿತರ ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸಲಿದ್ದಾರೆ ಎಂದು ಕಾರ್ಕಳ ಹಾಗೂ ಹೆಬ್ರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ಸದಾಶಿವ ದೇವಾಡಿಗ ಮತ್ತು ಚಂದ್ರಶೇಖರ್ ಬಾಯರಿ ರಾಜ್ಯ ಕಾಂಗ್ರೆಸ್ ಹಿಂದುಳಿದ ವರ್ಗಗಳ ಉಪಾಧ್ಯಕ್ಷ ಡಿ ಆರ್ ರಾಜು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News