ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲೆಗೆ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ಚಾಂಪಿಯನ್ ಶಿಪ್, ಪಥ ಸಂಚಲನದಲ್ಲಿ ಪ್ರಥಮ ಸ್ಥಾನ
ಕಾರ್ಕಳ : ಮಂಗಳೂರು ವಿಶ್ವ ವಿದ್ಯಾಲಯ, ಯುವಜನ ಕ್ರೀಡಾ ಇಲಾಖೆ, ಜಿ.ಪ.ಉಡುಪಿ, ಡಾ ಜಿ.ಶಂಕರ್ ಸರಕಾರಿ ಮಹಿಳಾ ಕಾಲೇಜು, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಇವರ ಸಹಯೋಗದಲ್ಲಿ ಉಡುಪಿ ಅಜ್ಜರಕಾಡು ಸ್ಟೇಡಿಯಂ ನಲ್ಲಿ ನಡೆದ ಕ್ರೀಡಾ ಕೂಟದಲ್ಲಿ ಕಾರ್ಕಳ ಅಯ್ಯಪ್ಪನಗರ ವಿಜೇತ ವಿಶೇಷ ಶಾಲಾ ಮಕ್ಕಳು ಭಾಗವಹಿಸಿ ಚಾಂಪಿಯನ್ ಶಿಪ್ 2025 ಹಾಗೂ ಪಥ ಸಂಚಲನದಲ್ಲಿ ಪ್ರಥಮ ಸ್ಥಾನವನ್ನು ಪಡೆದಿದೆ.
ಶಾಸಕ ಯಶ್ ಪಾಲ್ ಸುವರ್ಣ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಶುಭ ಹಾರೈಸಿದರು. ಸಮಾರಂಭದಲ್ಲಿ ರೆಡ್ ಕ್ರಾಸ್ ಸಂಸ್ಥೆಯ ಅಧ್ಯಕ್ಷ ಬಸ್ರುರು ರಾಜೀವ್ ಶೆಟ್ಟಿ ವಿದ್ಯಾರ್ಥಿಗಳಿಗೆ ಪಥ ಸಂಚಲನದ ಬಹುಮಾನ ವಿತರಿಸಿದರು.
ಸಮಾರೋಪ ಸಮಾರಂಭದಲ್ಲಿ ಉದ್ಯಮಿ ಬಂಟ್ಸ್ ಸಂಘ ಮುಂಬೈ ಜತೆ ಕಾರ್ಯದರ್ಶಿ, ಗಿರೀಶ್ ಶೆಟ್ಟಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ನಿರ್ದೇಶನಾಲಯದ ಯೋಜನಾ ನಿರ್ದೇಶಕರು ಅಲೀಮಾ ಇವರು ಉಪಸ್ಥಿತರಿದ್ದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಗಿರೀಶ್ ಶೆಟ್ಟಿ ತೆಲ್ಲಾರ್ ಇವರು ವಿಜೇತ ವಿಶೇಷ ಶಾಲೆಗೆ ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು.
ವಿಜೇತ ವಿಶೇಷ ಶಾಲೆಯಿಂದ ವಿವಿಧ ಸ್ಪರ್ಧೆಗಳಲ್ಲಿ ಹಾಗೂ ಪಥ ಸಂಚಲನದಲ್ಲಿ ಒಟ್ಟು 48 ವಿದ್ಯಾರ್ಥಿಗಳು ಭಾಗವಹಿಸಿದ್ದು, ಚಿನ್ನದ ಪದಕ-30, ಬೆಳ್ಳಿ ಪದಕ -18 ಕಂಚಿನ ಪದಕ - 15 ಒಟ್ಟು 63 ಪದಕಗಳನ್ನು ಗಳಿಸಿದ್ದಾರೆ.
ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿ ಶಾಲೆಗೆ ಕೀರ್ತಿ ತಂದ ವಿಜೇತ ಶಾಲೆಯ ಮಕ್ಕಳಿಗೆ ಶಾಲಾ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗ ಅಭಿನಂದನೆ ಸಲ್ಲಿಸಿದೆ.