ಗ್ಯಾರಂಟಿ ಶಕ್ತಿ ಯೋಜನೆಯಲ್ಲಿ 500 ಕೋಟಿ ಮಹಿಳೆಯರ ಪ್ರಯಾಣ; ಕಾರ್ಕಳ ಕಾಂಗ್ರೆಸ್ ವತಿಯಿಂದ ಸಂಭ್ರಮಾಚರಣೆ
ಕಾರ್ಕಳ : ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದಲ್ಲಿ ಮಹಿಳಾ ಪ್ರಯಾಣಿಕರ ಪ್ರಯಾಣದ ಸಂಖ್ಯೆ 500 ಕೋಟಿ ತಲುಪಿದ್ದು ಈ ಐತಿಹಾಸಿಕ ಸಾಧನೆಯನ್ನು ಕಾರ್ಕಳ ಕಾಂಗ್ರೆಸ್ ವತಿಯಿಂದ ವಿಶಿಷ್ಟವಾಗಿ ಆಚರಿಸಲಾಯಿತು.
ಇಂದು ಕಾರ್ಕಳದ ಬಂಡಿಮಠ ಬಸ್ಸ್ ನಿಲ್ದಾಣದಲ್ಲಿ ಸರ್ಕಾರಿ ಬಸ್ಸನ್ನು ಸಿಂಗರಿಸಲಾಯಿತು.ಬಸ್ಸಿನಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕ ನಿರ್ವಾಹಕರಾದ ಕೇಶವ.ಜಿ.ಹೆಚ್, ಶಿವಪುತ್ರ ಕುಂಬಾರ ಇವರಿಗೆ ಶಾಲು, ಫಲಪುಷ್ಟ ಕಾಣಿಕೆ ನೀಡಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷರು, ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು,ಕಾರ್ಕಳ ಬ್ಲಾಕ್ ಅಧ್ಯಕ್ಷ ಶುಭದ ರಾವ್, ಹಿರಿಯ ವಕೀಲ ಶೇಖರ ಮಡಿವಾಳ, ಜಿಲ್ಲಾ ಕಾಂಗ್ರೆಸ್ ವಕ್ತಾರರಾದ ಬಿಪಿನ್ ಚಂದ್ರ ಪಾಲ್, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಭಾನು ಭಾಸ್ಕರ ಪೂಜಾರಿ ಸಂದರ್ಭೋಚಿತವಾಗಿ ಮಾತನಾಡಿದರು.
ಈ ಸಂದರ್ಭದಲ್ಲಿ ಕಿಸಾನ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಇಂಟಕ್ ಜಿಲ್ಲಾಧ್ಯಕ್ಷ ಕಿರಣ್ ಹೆಗ್ಡೆ, ಅನಿತಾ ಡಿಸೋಜ, ಯುವ ಕಾಂಗ್ರೆಸ್ ಅಧ್ಯಕ್ಷ ಸೂರಜ್ ಶೆಟ್ಟಿ ನಕ್ರೆ, ಕೆ.ಎಮ್.ಎಪ್. ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು, ನಗರ ಕಾಂಗ್ರೆಸ್ ಅಧ್ಯಕ್ಷರುಗಳಾದ ರಾಜೇಂದ್ರ ದೇವಾಡಿಗ ಮತ್ತು ರೀನಾ ಡಿಸೋಜ, ವಿವಿಧ ಘಟಕಗಳ ಅಧ್ಯಕ್ಷರುಗಳು, ಗ್ರಾಮೀಣ ಸಮಿತಿಯ ಅಧ್ಯಕ್ಷರುಗಳು, ಚುನಾಯಿತ ಜನಪ್ರತಿನಿಧಿಗಳು, ಗ್ಯಾರಂಟಿ ಸಮಿತಿಯ ಸದಸ್ಯರುಗಳು, ಮಹಿಳಾ ಪದಾಧಿಕಾರಿಗಳು, ಯುವ ಕಾಂಗ್ರೆಸ್ ಅಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಗ್ಯಾರಂಟಿ ಸಮಿತಿಯ ಸದಸ್ಯ ಪಿಲಿಪ್ ಮಸ್ಕರನೇನಸ್ ಸ್ವಾಗತಿಸಿ ಹೇಮಂತ ಆಚಾರ್ಯ ಧನ್ಯವಾದವಿತ್ತು ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ನಿರೂಪಿಸಿದರು.