×
Ad

ಕಾರ್ಕಳ| ಪರಶುರಾಮ ಥೀಮ್ ಪಾರ್ಕ್‌ನಲ್ಲಿ ತಾಮ್ರದ ಹೊದಿಕೆ ಕಳವು ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2026-01-10 21:55 IST

ಕಾರ್ಕಳ: ಬೈಲೂರು ಉಮ್ಮಿಕಲ್ ಬೆಟ್ಟದಲ್ಲಿರುವ ಪರಶುರಾಮ್ ಥೀಮ್ ಪಾರ್ಕ್ ನ ಕಟ್ಟಡದ ಮೇಲ್ಚಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಕಾರ್ಕಳ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಂಗಳೂರು ಕಳವಾರು ಚಚ್೯ ಗುಡ್ಡೆಯ ಆರೀಫ್ ಯಾನೆ ಮುನ್ನ(37) ಹಾಗೂ ಮಂಗಳೂರು ಕಾವೂರಿನ ಅಬ್ದುಲ್ ಹಮೀದ್ (32) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಇವರು ಜ.3ರಂದು ಪಾಕ್೯ನ ಕಟ್ಟಡದ ಮುಖ್ಯ ಬಾಗಿಲನ್ನು ಮುರಿದು ಒಳನುಗ್ಗಿ ಕಟ್ಟಡದ ಮೇಲ್ಛಾವಣಿಗೆ ಅಳವಡಿಸಿದ ತಾಮ್ರದ ಹೊದಿಕೆಯನ್ನು ಕಳವು ಮಾಡಿಕೊಂಡು ಹೋಗಿರುವ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಪ್ರಕರಣದ ಗಂಭೀರತೆ ಹಾಗೂ ಸೂಕ್ಷ್ಮತೆಯನ್ನು ಅರಿತ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರೀರಾಂ ಶಂಕರ ಆರೋಪಿಗಳ ಪತ್ತೆಗಾಗಿ ಮೂರು ವಿಶೇಷ ತಂಡಗಳನ್ನು ರಚಿಸಿದ್ದು ವಿಶೇಷ ಪೊಲೀಸ್ ತಂಡವು ಉಡುಪಿ, ದ.ಕ ಜಿಲ್ಲೆಯಲ್ಲಿ ಹಾಗೂ ಮಂಗಳೂರು ನಗರದಲ್ಲಿ ಹುಡುಕಾಡಿ ಆರೋಪಿಗಳನ್ನು ಬಂಧಿಸಿದೆ.

ಬಂಧಿತರಿಂದ ಕಳವು ಮಾಡಿದ 45,000 ರೂ. ಮೌಲ್ಯದ 51 ಕೆಜಿ ತಾಮ್ರದ ಹೊದಿಕೆ ಹಾಗೂ 1200ರೂ. ಮೌಲ್ಯದ 2 ಸಿಲಿಂಗ್ ಫ್ಯಾನ್, ಕೃತ್ಯಕ್ಕೆ ಬಳಸಿದ 1 ಲಕ್ಷ ರೂ. ಮೌಲ್ಯದ ಗೂಡ್ಸ್ ಅಟೋರಿಕ್ಷಾ, 70,000ರೂ. ಮೌಲ್ಯದ ಬೈಕ್ ನ್ನು ಪೊಲೀಸರು ವಶ ಪಡಿಸಿಕೊಂಡಿದ್ದಾರೆ.

ತಲೆಮರೆಸಿಕೊಂಡ ಇತರ ಆರೋಪಿಗಳ ಪತ್ತೆಗೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಆರೀಫ್ ವಿರುದ್ಧ ಪಡುಬಿದ್ರೆ, ಉಡುಪಿ ನಗರ, ಬ್ರಹ್ಮಾವರ ಪೊಲೀಸ್ ಠಾಣೆ, ಕಾರ್ಕಳ ಗ್ರಾಮಾಂತರ ಹಾಗೂ ಮುಲ್ಕಿ, ಮೂಡುಬಿದಿರೆ ಪೊಲೀಸ್ ಠಾಣೆಗಳಲ್ಲಿ 9 ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಹಮೀದ್ ವಿರುದ್ಧ ಬಜ್ಪೆ ಹಾಗೂ ಮೂಡುಬಿದಿರೆ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ.

ಕಾರ್ಕಳ ಉಪವಿಭಾಗದ ಪ್ರಭಾರ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ. ನೇತೃತ್ವದಲ್ಲಿ ಕಾರ್ಕಳ ನಗರ ಪೊಲೀಸ್ ಠಾಣಾ ಪೊಲೀಸ್ ನಿರೀಕ್ಷಕ ಮಂಜಪ್ಪ ಡಿ.ಆರ್. ಕಾರ್ಕಳ ನಗರ ಪೊಲೀಸ್ ಠಾಣಾ ಎಸ್ಸೈಗಳಾದ ಮುರುಳೀಧರ ನಾಯ್ಕ, ಶಿವಕುಮಾರ್ ಎಸ್.ಆರ್., ಕಾರ್ಕಳ ಗ್ರಾಮಾಂತರ ಠಾಣಾ ಎಸ್ಸೈಗಳಾದ ಪ್ರಸನ್ನ ಕುಮಾರ್ ಎಮ್.ಎಸ್., ಸುಂದರ ಹಾಗೂ ಸಿಬ್ಬಂದಿ ರಂಜೀತ್ ಕುಮಾರ್ ಶೆಟ್ಟಿ, ಸದಾಶಿವ ಶೆಟ್ಟಿ ಗೋಪಾಲಕೃಷ್ಣ, ಚಂದ್ರ ಶೇಖರ, ಸತೀಶ ಪ್ರದೀಪ, ಶಿವಾನಂದ ಲೊಕೇಶ, ಮಹಾತೇಶ, ಸಂತೋಷ ಗೋಣಿಯಪ್ಪನವರ್, ಶ್ರೀನಿವಾಸ, ಆನಂದ, ಸಂತೋಷ, ಅರ್ಚನಾ ಹಾಗೂ ಚಾಲಕರಾದ ಅಶೋಕ ಕುಮಾರ್ ಹಾಗೂ ಪ್ರಸಾದ ಹಾಗೂ ಜಿಲ್ಲಾ ಆರ್‌ಡಿಸೆಲ್ ವಿಭಾಗದ ದಿನೇಶ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News