×
Ad

ಕಾರ್ಕಳ: ಪರಶುರಾಮ ಥೀಮ್ ಪಾರ್ಕ್ ನಿಂದ ಫ್ಯಾನ್ ಕಳವು: ಇಬ್ಬರು ಅಪ್ರಾಪ್ತ ವಯಸ್ಕರ ವಿರುದ್ಧ ಪ್ರಕರಣ ದಾಖಲು

Update: 2026-01-15 15:25 IST

PC: x.com/thisisudupi

ಕಾರ್ಕಳ, ಜ.15: ಬೈಲೂರು ಪರಶುರಾಮ ಥೀಮ್ ಪಾರ್ಕ್ ನಲ್ಲಿನ ಕಟ್ಟಡದ ಫ್ಯಾನ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2025ರ ಜನವರಿಯಿಂದ ಜೂನ್ ತಿಂಗಳ ಮಧ್ಯಾವಧಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನಿಂದ ಎರಡು ಫ್ಯಾನ್ ಗಳನ್ನು ಕಳವು ಮಾಡಿದ ಆರೋಪದಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನವರ ವಿರುದ್ಧ ಜ.12ರಂದು ಮಂಜುನಾಥ್ ಜೋಗಿ ಎಂಬವರು ನೀಡಿದ ದೂರಿನಂತೆ ಪ್ರಕರಣ ದಾಖಲಿಸಿ, ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ಹರಿರಾಂ ಶಂಕರ್ ತಿಳಿಸಿದ್ದಾರೆ.

ಈ ಪ್ರಕರಣವು ಇತ್ತೀಚೆಗೆ ಪರಶುರಾಮ ಥೀಮ್ ಪಾರ್ಕ್ ಕಟ್ಟಡದ ತಾಮ್ರದ ಮೇಲ್ಛಾವಣಿ ಕಳವು ಪ್ರಕರಣದಿಂದ ಸಂಪೂರ್ಣವಾಗಿ ಭಿನ್ನವಾಗಿದ್ದು, ಈ ಎರಡೂ ಪ್ರಕರಣಗಳಿಗೆ ಯಾವುದೇ ಸಂಬಂಧ ಇಲ್ಲ ಎಂದು ಎಸ್ಪಿ ಸ್ಪಷ್ಟಪಡಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News